ಉಚಿತ ಮಧುಮೇಹ ತಪಾಸಣೆ ಶಿಬಿರ
ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 15:ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಬಾಗಲಕೋಟೆಯ ನಮ್ಮ ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಬಿ.ವಿ.ವಿ.ಎಸ್ ನರ್ಸಿಂಗ್ ಮಹಾವಿದ್ಯಾಲಯದ ಸಹಯೋಗದಲ್ಲಿ ಉಚಿತ ಮಧುಮೇಹ ತಪಾಸಣೆ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.ನೂರಕ್ಕೂ ಹೆಚ್ಚು ಜನರು ಮಧುಮೇಹ ತಪಾಸಣೆ ಮಾಡಿಸಿಕೊಂಡು ಮಧುಮೇಹ ನಿಯಂತ್ರಣದ ಕುರಿತು ಮಾಹಿತಿ ಪಡೆದುಕೊಂಡರು. ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಮಧುಮೇಹದ ಕುರಿತು ಅಭಿನಯಿಸಿದ ನಾಟಕ ಅರ್ಥಪೂರ್ಣವಾಗಿತ್ತು.ಈ ಸಂದರ್ಭದಲ್ಲಿ ಬಿ.ವಿ.ವಿ.ಎಸ್ ನರ್ಸಿಂಗ್ ಕಾಲೇಜಿನ ಉಪನ್ಯಾಸಕಾದ ಶ್ರೀಮತಿ ಲಕ್ಷ್ಮವ್ವ ಗೊಂಡಿ, ಕಾಲೇಜಿನ…


