ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ-ಸಚಿವ ಡಾ.ಎಂ.ಬಿ. ಪಾಟೀಲ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜುಲೈ 2ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ ಮಳೆ ಅಭಾವದಿಂದ ಜಿಲ್ಲೆಯಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆ ಸೇರಿದಂತೆ…


