
ಯುಕೆಪಿ ಮೂರನೇ ಹಂತದ ಯೋಜನೆ ಕುರಿತು ಡಿಸಿಎಂ ಡಿಕೆಶಿ ಚರ್ಚೆ
ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 3:ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದರು.ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ದರ್ಶನಪೂರ್, ಡಿ. ಸುಧಾಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.