ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಜಿಲ್ಲಾಡಳಿತದಿಂದ ನಮನ
ಸಪ್ತಸಾಗರ ವಾರ್ತೆ, ವಿಜಯಪುರ ಜ.30: ಸ್ವಾತಂತ್ರ‍್ಯ ಯೋಧರ ತ್ಯಾಗ ಬಲಿದಾನ ಹೋರಾಟ ನಮ್ಮೆಲ್ಲರಿಗೂ ಮಾರ್ಗದರ್ಶನ ಪ್ರತಿದಿನ ಆ ಹೋರಾಟಗಾರರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಾನಗರಪಾಲಿಕೆ ಭಾರತೀಯ ಸೇವಾದಳ, ಭಾರತೀಯ ಸ್ಕೌಟ್ಸ್ ಹಾಗೂ ಗೈಡ್ಸ್ ಇವರ ಸಹಯೋಗದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಹುತಾತ್ಮರ (ಮೀನಾಕ್ಷಿ ಚೌಕ್) ವೃತ್ತದಲ್ಲಿರುವ ಸ್ಮಾರಕಕ್ಕೆ ಹಾಗೂ ಮಹಾತ್ಮ ಗಾಂಧಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ದೇಶದ…


