ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಏ. 16:ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಇಂದು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ಜರುಗಿತು.ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ…

Read More

ಜನಗಣತಿ‌ ಯಶಸ್ವಿಗೊಳಿಸಲು ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 5: ಜನಗಣತಿ-2027ರಡಿ ಮನೆಗಳ ಪಟ್ಟಿ ಮತ್ತು ಮನೆ ಗಣತಿಯನ್ನು ಏ. 16 ರಿಂದ ಮೇ 15ರವರೆಗೆ 30 ದಿನಗಳ ಕಾಲ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ತಿಳಿಸಿದ್ದಾರೆ.‌ಈಗಾಗಲೇ ಏ. 1ರಿಂದ ಸ್ವಯಂ ಗಣತಿಗೆ ಅಧಿಕೃತ‌ ಚಾಲನೆ ಸಿಕ್ಕಿದ್ದು, ಏ. 15 ರವರೆಗೆ ಅವಕಾಶ ಕಲ್ಪಿಸಲಾಗಿದೆ ತಿಳಿಸಿದರು.ಜನಗಣತಿಯು ಅತ್ಯಂತ ತಳಮಟ್ಟದ ಆಡಳಿತ ಘಟಕಗಳಿಗೆ, ಅಂದರೆ, ಗ್ರಾಮೀಣ ಪ್ರದೇಶದ ಹಳ್ಳಿಗಳು ಮತ್ತು ನಗರ ಪ್ರದೇಶಗಳಲ್ಲಿನ ಪಟ್ಟಣ, ವಾರ್ಡ್ ಗಳಿಗೆ ವಸತಿ ಸ್ಥಿತಿ,…

Read More

ನಿಗದಿತ ಸಮಯಕ್ಕೆ ಕಚೇರಿಯಲ್ಲಿರಲು ಜಿಲ್ಲಾಧಿಕಾರಿ‌ ಖಡಕ್ ಸೂಚನೆ:ಜಿಲ್ಲೆಯಲ್ಲಿ ತಾಪಮಾನ ಹಿನ್ನೆಲೆ ಬದಲಾದ ಸರ್ಕಾರಿ ಕಚೇರಿ ಸಮಯ

ಸಪ್ತಸಾಗರ ವಾರ್ತೆ,ವಿಜಯಪುರ, ಏ.1: 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ಜಿಲ್ಲೆಯಲ್ಲಿ ಸರಕಾರಿ ಕಚೇರಿ ಸಮಯ ಬದಲಾವಣೆಯಾಗುತ್ತಿದ್ದಂತೆಯೇ, ಬುಧವಾರ ಬೆಳಗ್ಗೆಯೇ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ಕೃಷಿ ಇಲಾಖೆ ಜಂಟಿ‌ ನಿರ್ದೇಶಕರ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿ,ಅಧಿಕಾರಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು.ಕಚೇರಿ ಸಮಯ ಬದಲಾವಣೆ ಹಿನ್ನೆಲೆಯಲ್ಲಿ ಬುಧವಾರ ನಗರದ ವಿವಿಧ ಇಲಾಖೆಗಳ ಕಚೇರಿಗೆ ದಿಢೀರ್ ಭೇಟಿ ನೀಡಿ, ಸಿಬ್ಬಂದಿ…

Read More

ತಾಪಮಾನ: ಸಾರ್ವಜನಿಕರಿಗೆ ಜಿಲ್ಲಾಧಿಕಾರಿ ಸಲಹೆ, ಸೂಚನೆ‌

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.5:ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ‌ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು‌‌ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ‌ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.ರಾಜ್ಯದ ಕೆಲ‌ ಜಿಲ್ಲೆಗಳಲ್ಲಿ 3 ರಿಂದ 6 ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ…

Read More

ಜಿಲ್ಲೆಯಲ್ಲಿ ಅಪಘಾತ ತಡೆಗೆ ಮುನ್ನೆಚ್ಚರಿಕಾ-ಸುರಕ್ಷತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಜಿಲ್ಲೆಯಲ್ಲಿ ಅಪಘಾತ ತಡೆಗೆ ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಅಪಘಾತ ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಸ್ತೆ ಅಪಘಾತ ತಡೆಗೆ ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಮುಖ್ಯ ರಸ್ತೆ ಸೇರಿದಂತೆ ಅಪಘಾತ ವಲಯಗಳಲ್ಲಿ ಅಪಘಾತ ಪ್ರಮಾಣ ತಗ್ಗಿಸಲು ಸಂಬಂಧಿಸಿದ…

Read More

ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಕುರಿತು ವ್ಯಾಪಕ ಜಾಗೃತಿ ಮೂಡಿಸಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.31: ಯುವ ಜನಾಂಗ ದುಶ್ಚಟಗಳಿಗೆ ಬಲಿಯಾದಂತೆ ನೋಡಿಕೊಳ್ಳಲು ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಸಹಕಾರದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಮಾದಕ ವಸ್ತು ನಿರ್ಮೂಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಾದಕ ವ್ಯಸನಕ್ಕೆ ಒಳಗಾಗಿ ತಮ್ಮ ಸುಂದರ ಬದುಕನ್ನು ಹಾಳು ಮಾಡಿಕೊಳ್ಳದಂತೆ ಮಾದಕ ವಸ್ತು-ದ್ರವ್ಯಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ…

Read More