ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಕ್ತಾರರಾಗಿ ಎಸ್.ಎಸ್. ಖಾದ್ರಿ ಇನಾಮದಾರ ನೇಮಕ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ.26:ವಿಜಯಪುರ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ತಾರರಾಗಿ ಹಿರಿಯ ಜೆಡಿಎಸ್ ಮುಖಂಡ ಎಸ್.ಎಸ್. ಖಾದ್ರಿ ಇನಾಮದಾರ ಅವರನ್ನು ನೇಮಕ ಮಾಡಲಾಗಿದೆ.ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಅವರು ನೇಮಕಾತಿ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಖಾದ್ರಿ ಇನಾಮದಾರ ಅವರಿಗೆ ಉಭಯ ಜವಾಬ್ದಾರಿ ವಹಿಸಲಾಗಿದೆ.ಪಕ್ಷದ ಸಂಘಟನೆ, ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವುದರೊಂದಿಗೆ ಜಿಲ್ಲೆಯ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಸಂಘಟಿಸಿ…


