
ಸೆ.3ರಿಂದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 30: 2025-26ನೇ ಸಾಲಿನ ವಿಜಯಪುರ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದ ಪುರುಷ ಮತ್ತು ಮಹಿಳಾ ವಿಭಾಗದ ಸ್ಪರ್ಧೆಗಳನ್ನು ಸೆ.3 ಹಾಗೂ 4 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕ್ರೀಡಾಕೂಟದಲ್ಲಿ ಅಥ್ಲೆಟಿಕ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‍ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‍ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಯೋಗಾಸನ ಕ್ರೀಡೆಗಳನ್ನು ಸಂಘಟಿಸಲಾಗುವುದು.ತಾಲೂಕಾ ಮಟ್ಟದ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ-ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ…