
ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ?- ಡಿಕೆಶಿ ಪ್ರಶ್ನೆ
ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.20:“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ…