ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ: ಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂನ್ 27: “ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ. ಇದನ್ನು ಯಾರೂ ಸಹ ಮರೆಯಬಾರದು.‌ ಈ ಹಾದಿಯಲ್ಲಿಯೇ ನಾವೆಲ್ಲರೂ ನಡೆಯಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.ಯಲಹಂಕದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಒಕ್ಕಲಿಗರ ಸಮಿತಿ ಶನಿವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಿವಕುಮಾರ್ ಅವರು ಮಾತನಾಡಿದರು.“ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು ಕೆಂಪೇಗೌಡರು. 500 ವರ್ಷಗಳ ಹಿಂದೆ ಈ ಭೂಮಿಗೆ ಪೂಜೆ ಮಾಡಿ…

Read More

ಕುಮಾರಸ್ವಾಮಿ ಪಂಥಾಹ್ವಾನಕ್ಕೆ ಸಿದ್ಧ:ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಮೇ 20:“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸರ್ಕಾರಿ ಗೃಹ ಕಚೇರಿ ಕುಮಾರಪಾರ್ಕ್ ನಲ್ಲಿ ಶಿವಕುಮಾರ್ ಅವರು ಬುಧವಾರ ಬಿಡದಿ ಟೌನ್ ಶಿಪ್ ಯೋಜನೆ ಕುರಿತು ಆ ಭಾಗದ ರೈತರೊಂದಿಗೆ ಸಭೆ…

Read More

ನನ್ನ ಟ್ವೀಟ್ ಅನ್ನು ಬೇರೆ ರೀತಿ ವ್ಯಾಖ್ಯಾನ ಮಾಡುವುದರಲ್ಲಿ ಅರ್ಥವಿಲ್ಲ- ಡಿಕೆಶಿ

ಸಪ್ತಸಾಗರ ವಾರ್ತೆ ಬೆಂಗಳೂರು, ಜ.15:“ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, “ನಾಳೆ ದೆಹಲಿಗೆ ಹೋದಾಗ ಎಲ್ಲಾ ನಾಯಕರು ಅಲ್ಲೇ ಇರುತ್ತಾರೆ. ಭೇಟಿ ಮಾಡುತ್ತೇನೆ”ಎಂದರು.ರಾಹುಲ್ ಗಾಂಧಿ ಅವರ ಭೇಟಿ ನಂತರ ನಿಮ್ಮ ಬೆಂಬಲಿಗ ಶಾಸಕರು ಸಂತೋಷವಾಗಿದ್ದಾರೆ ಎಂದು ಕೇಳಿದಾಗ, “ಅವರು ನಮ್ಮ ಪಕ್ಷದ ನಾಯಕರು.ನಮ್ಮ…

Read More

ದೇಶದ 140 ಕೋಟಿ ಜನರ ಮತದಾನದ ಹಕ್ಕಿಗಾಗಿ ಹೋರಾಟ:ಡಿಕೆಶಿ

ಸಪ್ತಸಾಗರ ವಾರ್ತೆ, ನವದೆಹಲಿ, ಡಿ.14:“ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ…

Read More

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಳಗಾವಿ, ಡಿ.9:“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ…

Read More

ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.16:“ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು.“ಸಮ್ಮಿಶ್ರ ಸರ್ಕಾರದಲ್ಲಿ ಹತ್ತು ಜನ‌ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್ ಗೆ ಕರೆದುಕೊಂಡು ಬಂದೆ.‌ ಆಗ ನನಗೆ ಒಬ್ಬ…

Read More

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿಕೆಶಿ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.8:“ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು….

Read More

ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ?- ಡಿಕೆಶಿ ಪ್ರಶ್ನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.20:“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ…

Read More

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ

ಸಪ್ತಸಾಗರ ವಾರ್ತೆ ರಾಮನಗರ, ಸೆ.19:“ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ…

Read More