ದೇಶದ ಸಂಸ್ಕೃತಿ, ಇತಿಹಾಸ, ಸಂವಿಧಾನ ಗೌರವಿಸುವುದೇ ನಿಜವಾದ ದೇಶಪ್ರೇಮ: ಡಾ. ಜಾವೀದ್ ಜಮಾದಾರ್
ಸಪ್ತಸಾಗರ ವಾರ್ತೆ | ವಿಜಯಪುರ, ಆ.9: ರಾಷ್ಟ್ರಪ್ರೇಮವೆಂದರೆ ಕೇವಲ ದೇಶದ ಮೇಲಿನ ಪ್ರೀತಿ, ಭಕ್ತಿ ಮತ್ತು ಗೌರವಕ್ಕೆ ಸೀಮಿತವಾಗಿಲ್ಲ. ದೇಶದ ಸಂಸ್ಕೃತಿ, ಇತಿಹಾಸ ಹಾಗೂ ಸಂವಿಧಾನವನ್ನು ಗೌರವಿಸುವುದರ ಜೊತೆಗೆ, ದೇಶದ ಒಳಿತಿಗಾಗಿ ನಿಸ್ವಾರ್ಥ ಸೇವೆ ಸಲ್ಲಿಸುವ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಮುಖ್ಯವಾಗಿ ಬಾಲ್ಯದಿಂದಲೇ ಮಕ್ಕಳಲ್ಲಿ ರಾಷ್ಟ್ರಪ್ರೇಮದ ಸಂಸ್ಕಾರ ಬೆಳೆಸುವ ಅಗತ್ಯವಿದೆ ಎಂದು ನವದೆಹಲಿಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರ ವೇದಿಕೆ ಅಧ್ಯಕ್ಷ ಡಾ. ಜಾವೀದ್ ಜಮಾದಾರ್ ಪ್ರತಿಪಾದಿಸಿದರು.ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ, ತಾಲೂಕು…


