ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಪ್ತಸಾಗರ ವಾರ್ತೆ,ಬೆಂಗಳೂರು, ಏ. 16:ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಇಂದು ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ಜರುಗಿತು.ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ…


