
ಸಾಮಾಜಿಕ, ಶೈಕ್ಷಣಿಕ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಮನೆ-ಮನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಚಾಲನೆ ನೀಡಿದರು. ಸೋಮವಾರ ನಗರದ ಕೀರ್ತಿನಗರದಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ರವರೆಗೆ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಿದ್ದು, ಸಮೀಕ್ಷಾದಾರರು ತಮ್ಮ ಮನೆಗೆ…