ಸಂಘಟಿತ ಸಮಾಜ ನಿರ್ಮಾಣಕ್ಕೆ ಶಿಕ್ಷಣ, ಸಂಸ್ಕಾರ ಅಗತ್ಯ: ಶಂಕರ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಸಮಾಜದ ಪ್ರಗತಿಗೆ ಶಿಕ್ಷಣ, ಸಂಸ್ಕಾರ, ಸಂಘಟನೆ ಮತ್ತು ಸಾಮಾಜಿಕ ಬದ್ಧತೆ ನಾಲ್ಕು ಪ್ರಮುಖ ಆಧಾರಸ್ತಂಭಗಳಾಗಿದ್ದು, ಇವುಗಳನ್ನು ಬಲಪಡಿಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೇಳಿದರು.ನಗರದ ವೀರಶೈವ ಲಿಂಗಾಯತ ಸಮಾಜ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕರ್ನಾಟಕ ರಾಜ್ಯ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ…

Read More

ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ- ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 3,ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ 3.25 ಕೋಟಿ ರೂಪಾಯಿ ವೆಚ್ಚದಲ್ಲಿ, ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಕೋಟ್ಯಾಳ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕಲಿಕಾ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರು…

Read More

ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದು- ಶ್ರೀನಿವಾಸ ಬಿದರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 17: ತಲೆತಲಾಂತರದಿಂದ ಬಂದ ಆಸ್ತಿಗಳನ್ನು ನಮ್ಮ ಹಿರಿಯರು ದಾನ ನೀಡಿದ್ದರ ಫಲವಾಗಿ ಆರಂಭಗೊಂಡ ಶಿಕ್ಷಣ ಸಂಸ್ಥೆಗಳು ಸಮಾಜದಲ್ಲಿ ಸತ್ಪ್ರಜೆಗಳನ್ನು ರೂಪಿಸಿವೆ ಎಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಮುಖ್ಯ ಪ್ರಧಾನ ಆಯುಕ್ತರಾಗಿರುವ ವಿಜಯಪುರದ ಶ್ರೀನಿವಾಸ ಬಿದರಿ ಹೇಳಿದರು.ಆದಾಯ ತೆರಿಗೆ ಇಲಾಖೆಯಲ್ಲಿ ಪ್ರಧಾನ ಆಯುಕ್ತರಿಂದ ಮುಖ್ಯ ಪ್ರಧಾನ ಆಯುಕ್ತರೆಂದು ಬಡ್ತಿ ಪಡೆದಿರುವ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಅವರ ಸ್ನೇಹಿತರು, ಶಾಲಾ-ಕಾಲೇಜು ಸಹಪಾಠಿಗಳು ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಜಯಪುರದ ದರ್ಬಾರ್, ಪಿಡಿಜೆ,…

Read More

ಬಾಲ ಕಾರ್ಮಿಕ ಪದ್ಧತಿ ನಿವಾರಣೆಗೆ ಶಿಕ್ಷಣವೇ ಅಸ್ತ್ರ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, 12:ಮಕ್ಕಳು ದೇಶದ ಭವಿಷ್ಯದ ಆಸ್ತಿ. ಮಕ್ಕಳ ಕೈಯಲ್ಲಿ ಪುಸ್ತಕವಿರಬೇಕು, ದುಡಿಮೆಯ ಆಯುಧ ಅಲ್ಲ. ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ಬಾಲ್ಯವನ್ನು ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಅಂತಾರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನವನ್ನು ಉದ್ಧೇಶಿಸಿ ಅವರು ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯ, ಆರೋಗ್ಯ, ಶಿಕ್ಷಣ ಕಸಿದುಕೊಳ್ಳುವ ಸಾಮಾಜಿಕ ಪಿಡುಗು. ಅದು ದೇಶದ ಭವಿಷ್ಯಕ್ಕೆ ಮಾರಕ….

Read More

ಶಾಲೆಗಳಿಗೆ ಆನ್‌ಲೈನ್ ಶಿಕ್ಷಣದ ಮೂಲಕ ಪಾಠ ಬೋಧನೆಗೆ ಪ್ರಧಾನಿ ಮೋದಿ ಸಲಹೆ ಹಾಸ್ಯಾಸ್ಪದ: ಅಜಮನಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ಜಾಗತಿಕ ಮಟ್ಟದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಶಾಲೆಗಳಿಗೆ ಆನ್‌ಲೈನ್ ಶಿಕ್ಷಣದ ಮೂಲಕ ಪಾಠ ಬೋಧನೆ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿರುವುದು ಗಮನಾರ್ಹ.ಆದರೆ ದೇಶದ ಬಡ, ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಇಂತಹ ನಿರ್ಧಾರಗಳನ್ನು ಕೈಗೊಳ್ಳುವುದು ಶಿಕ್ಷಣದ ಹಕ್ಕಿನ ಮೇಲೆಯೇ ಪ್ರಶ್ನೆ ಹುಟ್ಟಿಸುವಂತಾಗಿದೆ. ಇದು ಹಾಸ್ಯಾಸ್ಪದವಾಗಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯಕುಮಾರ ಅಜಮನಿ ಟೀಕಿಸಿದ್ದಾರೆ.ದೇಶದ ಅನೇಕ ನಗರಗಳ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳು, ಆದಿವಾಸಿ ಸಮುದಾಯದ…

Read More

ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ಸಾಧ್ಯ- ಸಚಿವ ಯತೀಂದ್ರ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಸಮಾರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 8:ಶಿಕ್ಷಣದಿಂದ ಮಾತ್ರ ಮಕ್ಕಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಭಾನುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಕುರುಬ ಸಮಾಜದ ಪ್ರತಿಭಾ ಪುರಸ್ಕಾರ ಹಾಗೂ ಲೋಕಮಾತಾ ಅಹಲ್ಯಾಬಾಯಿ ಹೊಳ್ಳರ್ 301ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಅಹಲ್ಯಾಬಾಯಿ ಹೋಳ್ಕರ ಶ್ರೇಷ್ಠ ಮಹಿಳೆ. ಅಪ್ರತಿಮ ಹೋರಾಟಗಾರ್ತಿ. ಅಹಲ್ಯಾಬಾಯಿ ಹೋಳ್ಕರ್ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಿದ್ದರು ಎಂದರು.ಸಮಾಜದ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ. ಹೀಗಾಗಿ ನಾವು ನಮ್ಮ…

Read More

ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಬದ್ಧ: ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 19:ಗ್ರಾಮೀಣ ಭಾಗದಲ್ಲಿ ನೀರಾವರಿ ಜೊತೆಗೆ ಗುಣಮಟ್ಟದ ವಿದ್ಯುತ್ ಹಾಗೂ ಶಿಕ್ಷಣ ಒದಗಿಸಲು ಕಾರ್ಯೋನ್ಮುಖನಾಗಿದ್ದೇನೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರ ತಾಲೂಕಿನ ಹೆಬ್ಬಾಳಟ್ಟಿಯಲ್ಲಿ ಚಂದ್ರಗಿರಿ ಸಿದ್ರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಈ ಜಾತ್ರೆಗೆ ನಮ್ಮ ತಂದೆಯವರ ಕಾಲದಿಂದಲೂ ಬರುತ್ತಿದ್ದೇವೆ. ದೇವರು, ಶ್ರೀಗಳು ಮತ್ತು ಗ್ರಾಮಸ್ಥರ ಆಶೀರ್ವಾದದಿಂದ ಜಲಸಂಪನ್ಮೂಲ‌ ಸಚಿವನಾಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ…

Read More

ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.16: ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ…

Read More

ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮಾದರಿ:ಡಾ. ವಿವೇಕ ಬೆನೆಗಲ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2: ಗುಣಮಟ್ಟದ ಅತ್ಯಾಧುನಿಕ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹೇಳಿ ಮಾಡಿಸಿದಂತಿದೆ ಎಂದು ಬೆಂಗಳೂರು ನಿಮ್ಹಾನ್ಸ್ ನ ಡಿ-ಎಡಿಕ್ಷನ್ ಸೆಂಟರ್ ಮುಖ್ಯಸ್ಥ ಮತ್ತು ಸೈಕ್ಯಾಟ್ರಿಕ್ ವಿಭಾಗದ ಮಾಜಿ ಮುಖ್ಯಸ್ಥ ಡಾ. ವಿವೇಕ ಬೆನೆಗಲ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಆಯೋಜಿಸಲಾದ ದಿ. ಡಾ. ಸಿ. ಆರ್. ಬಿದರಿ ಅವರ ಸ್ಮರಣಾರ್ಥ…

Read More

ನಿರ್ಲಕ್ಷಿತರಿಗೆ ಕಾಕಾ ಕಾರಖಾನೀಸರಿಂದ ಶಿಕ್ಷಣ ದಾಸೋಹ – ಬಿ.ಆರ್.ಬನಸೋಡೆ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.30: ನಿರ್ಲಕ್ಷಿತಗೊಳಗಾದವರನ್ನು ಸುಶಿಕ್ಷಿತರನ್ನಾಗಿಸಿದ ಶ್ರೇಯಸ್ಸು ಕಾಕಾ ಕಾರಖಾನೀಸರಿಗೆ ಸಲ್ಲುತ್ತದೆ. ಎಂದು ಜಾತಿಭೇದ, ಲಿಂಗಭೇದ ಮತ್ತು ವರ್ಣಭೇದ ಹೋಗಲಾಡಿಸಲು ಅಹರ್ನಿಶಿ ದುಡಿದವರು. ಅವರು ಕೇವಲ ಸಹಾನುಭೂತಿ ತೋರದೇ, ಅವರಲ್ಲಿ ಒಂದಾಗಿ ಅನುಭೂತಿಯನ್ನು ತೋರಿದ ಮಹಾನ್ ಧೀಮಂತರು ಎಂದು ಬಣ್ಣಿಸಿದರು.ಬ್ರಾಹ್ಮಣನಾಗಿದ್ದರೂ ನಾನು ಎಂದೆಂದೂ ಹರಿಜನನಾಗಿರುತ್ತೇನೆ ಎನ್ನುವ ಮೂಲಕ ಅದರಂತೆ ಬದುಕು ಸಾಗಿಸಿದವರು. ಸಮಾನತೆ ತರಲು ನಿರಂತರ ಹೋರಾಡಿದ ಹುಟ್ಟು ಸನ್ಯಾಸಿ, ದೇಶಪ್ರೇಮಿ, ಶತಾಯುಷಿ, ಸಾಬರಮತಿ ಆಶ್ರಮದಲ್ಲಿದ್ದು ಅಪ್ಪಟ ಗಾಂಧಿ ಅನುಯಾಯಿಯಾಗಿ ಪದ್ಮಶ್ರೀ ಕಾಕಾ ಕಾರಖಾನೀಸರು ಜನಾನುರಾಗಿಯಾಗಿದ್ದರು…

Read More