ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ-ಸುರೇಶಗೌಡ ಬಿರಾದಾರ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಇಂದಿನ ಮಕ್ಕಳೇ ಮುಂದಿನ ನಾಯಕರು.ಮಕ್ಕಳು ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜತೆಗೆ ಮಕ್ಕಳ ಸಂಸತ್ತಿನ ಮೂಲಕ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿ, ದೇಶಕ್ಕೆ ಉತ್ತಮ ನಾಗರಿಕರನ್ನು ಕಾಣಿಕೆಯಾಗಿ ನೀಡಲು ಸಾಧ್ಯ ಎಂದು ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಶುಕ್ರವಾರ ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ಶಾಲಾ ಸಂಸತ್ತು-ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ಸಂಸತ್-ಮಕ್ಕಳ ಪ್ರಾತಿನಿಧಿಕ ರಚನೆಯಾಗಿದ್ದು,…


