ನಿರ್ಲಕ್ಷಿತರಿಗೆ ಕಾಕಾ ಕಾರಖಾನೀಸರಿಂದ ಶಿಕ್ಷಣ ದಾಸೋಹ – ಬಿ.ಆರ್.ಬನಸೋಡೆ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.30: ನಿರ್ಲಕ್ಷಿತಗೊಳಗಾದವರನ್ನು ಸುಶಿಕ್ಷಿತರನ್ನಾಗಿಸಿದ ಶ್ರೇಯಸ್ಸು ಕಾಕಾ ಕಾರಖಾನೀಸರಿಗೆ ಸಲ್ಲುತ್ತದೆ. ಎಂದು ಜಾತಿಭೇದ, ಲಿಂಗಭೇದ ಮತ್ತು ವರ್ಣಭೇದ ಹೋಗಲಾಡಿಸಲು ಅಹರ್ನಿಶಿ ದುಡಿದವರು. ಅವರು ಕೇವಲ ಸಹಾನುಭೂತಿ ತೋರದೇ, ಅವರಲ್ಲಿ ಒಂದಾಗಿ ಅನುಭೂತಿಯನ್ನು ತೋರಿದ ಮಹಾನ್ ಧೀಮಂತರು ಎಂದು ಬಣ್ಣಿಸಿದರು.ಬ್ರಾಹ್ಮಣನಾಗಿದ್ದರೂ ನಾನು ಎಂದೆಂದೂ ಹರಿಜನನಾಗಿರುತ್ತೇನೆ ಎನ್ನುವ ಮೂಲಕ ಅದರಂತೆ ಬದುಕು ಸಾಗಿಸಿದವರು. ಸಮಾನತೆ ತರಲು ನಿರಂತರ ಹೋರಾಡಿದ ಹುಟ್ಟು ಸನ್ಯಾಸಿ, ದೇಶಪ್ರೇಮಿ, ಶತಾಯುಷಿ, ಸಾಬರಮತಿ ಆಶ್ರಮದಲ್ಲಿದ್ದು ಅಪ್ಪಟ ಗಾಂಧಿ ಅನುಯಾಯಿಯಾಗಿ ಪದ್ಮಶ್ರೀ ಕಾಕಾ ಕಾರಖಾನೀಸರು ಜನಾನುರಾಗಿಯಾಗಿದ್ದರು…

Read More

ಪಾಲಕರು ಚಾರಿತ್ರ್ಯದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು-ಹಾರಿಕ ಮಂಜುನಾಥ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 27: ಈಗಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸ್ವಾಮಿ ವಿವೇಕಾನಂದರಂತಹ ಚಾರಿತ್ರ್ಯದ ಶಿಕ್ಷಣಕ್ಕೆ ಪಾಲಕರು ಮೊದಲಾದ್ಯತೆ ನೀಡಬೇಕು. ಪಠ್ಯ ಪುಸ್ತಕಗಳು ಮಕ್ಕಳನ್ನು ಶಿಕ್ಷಣವಂತರಾಗಿ ಮಾತ್ರ ಮಾಡುತ್ತವೆ. ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಧಾರೆ ಎರೆಯಬೇಕು ಎಂದು ಬೆಂಗಳೂರಿನ ಯುವ ವಾಗ್ಮಿ ಕುಮಾರಿ ಹಾರಿಕ ಮಂಜುನಾಥ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿ…

Read More

ಅಜಾದ್ ಅವರ ಕೊಡುಗೆ ಉನ್ನತ ಶಿಕ್ಷಣಕ್ಕೆ ಅಮೂಲ್ಯ: ಡಾ. ರಾಮು ಸಜ್ಜನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಮೌಲಾನಾ ಅಜಾದ್ ಅವರು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪ್ರತಿಮವಾಗಿದ್ದು, ಅವರ ತತ್ವಗಳು ಇಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದು ಮುದ್ದೇಬಿಹಾಳದ ಎಂ.ಜಿ.ವಿ.ಸಿ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ. ರಾಮು ಹಸನಪ್ಪ ಸಜ್ಜನ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲಾನಾ ಅಜಾದ್ ಅಧ್ಯಯನ ಕೇಂದ್ರದ ವತಿಯಿಂದ ಇತ್ತೀಚಿಗೆ ಹಮ್ಮಿಕೊಂಡಿದ್ದ ಮೌಲಾನಾ ಅಜಾದ್ ಅವರ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಶಿಕ್ಷಣ…

Read More

ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಮತ್ತು‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನ ಆಚರಿಸಲಾಯಿತು.ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮಿಕಿ‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಇದೇ ವೇಳೆ ಬಿ.ಎಲ್.ಡಿ.ಇ‌ ಸಂಸ್ಥೆಯ ಅಧ್ಯಕ್ಷ ಮತ್ತು‌‌ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನವನ್ನು ಸಸಿ ವಿತರಿಸಯವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ‌ ಸಹಾಯಕ ಪ್ರಾಧ್ಯಾಪಕ‌ ಡಾ….

Read More

ಹೋರಾಟಕ್ಕೆ ರಾಯಣ್ಣ, ವಿಶ್ವಪ್ರಜ್ಞೆಗೆ ಕನಕದಾಸರು, ಶಿಕ್ಷಣಕ್ಕೆ ಅಹಲ್ಯಾಬಾಯಿ, ಸಾಮಾಜಿಕ ಬದ್ಧತೆಗೆ ಸಿದ್ದರಾಮಯ್ಯ ಅವರ ಮಾದರಿಗಳು ನಮ್ಮ ಜೊತೆಗಿವೆ: ಕೆವಿಪಿ

ಸಪ್ತಸಾಗರ ವಾರ್ತೆ ಕೋಲಾರ, ಸೆ. 28: ನಮ್ಮ ಸಮುದಾಯದ ಪ್ರತಿಭೆಗಳು ಸಮಾಜದ ಆಸ್ತಿಗಳಾಗಿ ಅರಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕರೆ ನೀಡಿದರು.ಕರ್ನಾಟಕ ರಾಜ್ಯ ಕನಕ‌ನೌಕರರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ನಮ್ಮ ಕುಲಕ್ಕೆ, ಸಮುದಾಯಕ್ಕೆ ಒಂದು ಶ್ರಮಿಕ ಪರಂಪರೆ ಇದೆ. ಈ ಪರಂಪರೆಯ ಒಳಗೆ ಅದ್ಭುತವಾದ ಮಾದರಿ ವ್ಯಕ್ತಿತ್ವಗಳೂ ಇವೆ. ಛಲ ಮತ್ತು ಹೋರಾಟಕ್ಕೆ ಸಂಗೊಳ್ಳಿ ರಾಯಣ್ಣ ಮಾದರಿ ಆದರೆ, ವಿಶ್ವಪ್ರಜ್ಞೆಗೆ ಕನಕದಾಸರು ಮಾದರಿ ಆಗಿದ್ದಾರೆ. ಶಿಕ್ಷಣಕ್ಕೆ…

Read More

ಸಾಮಾಜಿಕ, ಶೈಕ್ಷಣಿಕ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಜಿಲ್ಲೆಯಲ್ಲಿ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.22: ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಮನೆ-ಮನೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಜಿಲ್ಲೆಯಲ್ಲಿ ಇಂದಿನಿಂದ ಆರಂಭಿಸಲಾಗಿದ್ದು, ಸಮೀಕ್ಷಾ ಕಾರ್ಯಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಚಾಲನೆ ನೀಡಿದರು. ಸೋಮವಾರ ನಗರದ ಕೀರ್ತಿನಗರದಲ್ಲಿ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ರವರೆಗೆ ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳಲಿದ್ದು, ಸಮೀಕ್ಷಾದಾರರು ತಮ್ಮ ಮನೆಗೆ…

Read More

ಬೆಂಗಳೂರಿನಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದ ಕ್ಯಾಂಪಸ್ ಶೀಘ್ರ ಆರಂಭ:

ಸಪ್ತಸಾಗರ ವಾರ್ತೆ, ವಿಜಯಪುರ, ಆ. 21:ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯವು ಬೆಂಗಳೂರಿನಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಕ್ಯಾಂಪಸ್‍ ಅನ್ನು ಸ್ಥಾಪಿಸುತ್ತಿದೆ ಎಂದು ಬಿಎಲ್ ಡಿಇ ಡೀಮ್ಡ್ ವಿಶ್ವವಿದ್ಯಾಲಯ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ತಿಳಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, Engineering, Computer Applications, Business Administration, Pharmacy, Law, Architecture, Design and Applied Sciences ಸೇರಿದಂತೆ ಹಂತ ಹಂತವಾಗಿ 8-10 ಕಾಲೇಜುಗಳನ್ನು ಆರಂಭಿಸಲಿದೆ. ಇದಲ್ಲದೇ ಅಂತಾರಾಷ್ಟ್ರೀಯ ಶಾಲೆಯನ್ನೂ ಸಹ ಪ್ರಾರಂಭಿಸಲು ಯೋಜಿಸಿದೆ ಎಂದರು.ವಿವಿ ಈಗಾಗಲೇ ಇಂಜಿನಿಯರಿಂಗ್ ಮಹಾವಿದ್ಯಾಲಯ ಹೊಂದಿದ್ದು,ಬಿ.ಎಲ್.ಡಿ.ಇ….

Read More

ಮಕ್ಕಳ ಶೈಕ್ಷಣಿಕ ಉನ್ನತಿಗೆ ಶ್ರಮಿಸಿ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ವಿಜಯಪುರ, ಆ. 19:ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಧಾರವಾಡ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ತಿಕೋಟಾ ತಾಲೂಕಿನ ಅರಕೇರಿಯಲ್ಲಿ ಇರುವ ಅಲ್ಪಸಂಖ್ಯಾತರ ಇಲಾಖೆಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ‌ ನಡೆಸಿದರು.ವಿದ್ಯಾರ್ಥಿಗಳ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು.ವಿದ್ಯಾರ್ಥಿ ದೆಸೆಯಲ್ಲಿಯೇ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಪಠ್ಯದಿಂದಿಗೆ ಪಠ್ಯೇತರ ಚಟುವಟಿಕಯಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು.‌ವಿದ್ಯಾರ್ಥಿ ಜೀವನದ ಅತ್ಯಂತ ಜೀವನದ ಅತ್ಯಂತ ಮಹತ್ವದ…

Read More

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More