ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ಜಿಲ್ಲೆಯ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆಗಸ್ಟ್ 4ರವರೆಗೆ ಜಿಲ್ಲೆಯಲ್ಲಿ 16,79,495 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದ್ದು, ಆನ್‌ಲೈನ್ ಮೂಲಕ 4,069 ಮತದಾರರು…

Read More

ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಸಕ್ರಿಯ ಸಹಕಾರ: ಸಂದೀಪ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ನಗರದಲ್ಲಿ ದೋಷರಹಿತ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಚುನಾವಣಾ ಆಯೋಗದ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಗೆ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಸಂದೀಪ ಪಾಟೀಲ ಹೇಳಿದರು.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಒಟ್ಟು 2,90,479 ಮತದಾರರಿದ್ದು, ಈ ಪೈಕಿ 2,04,368 ಮತದಾರರ ಮಾಹಿತಿಯನ್ನು ಡಿಜಿಟೈಸೇಶನ್ ಮಾಡಲಾಗಿದೆ. ಇದುವರೆಗೆ ಶೇ.70.35ರಷ್ಟು ಕಾರ್ಯ…

Read More

ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಡಿಸಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ದೋಷರಹಿತ, ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ…

Read More

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಯುವ ಮತದಾರರಲ್ಲಿ ಜಾಗೃತಿ ಮೂಡಿಸಿದ ಬೃಹತ್ ಜಾಥಾ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29:ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಅತ್ಯಂತ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುವಜನತೆ ಸೇರಿದಂತೆ ಸಾರ್ವಜನಿಕರಲ್ಲಿ ಮತದಾರರ ನೋಂದಣಿ, ಹೆಸರು ಪರಿಶೀಲನೆ, ತಿದ್ದುಪಡಿ ಹಾಗೂ ಮತದಾನದ ಹಕ್ಕಿನ ಮಹತ್ವದ ಕುರಿತು ಅರಿವು ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದುಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಿಷಿ ಆನಂದ ಅವರು ಹೇಳಿದರು.ನಗರದ ಸರ್ಕಾರಿ…

Read More