ಯುವ ಸಂಸತ್ನಲ್ಲಿ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಚರ್ಚೆ
ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ತಿಕೋಟಾ ಪಟ್ಟಣದ ಹಜಿಮಸ್ತಾನಿ ಶಾದಿ ಮಹಲ್ನಲ್ಲಿ ಅ.13ರಂದು ನಡೆದ ಯುವ ಸಂಸತ್ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ 250 ವಿದ್ಯಾರ್ಥಿಗಳು ಭಾಗವಹಿಸಿ, ಸಂಸದೀಯ ಕಲಾಪದ ಮಾದರಿಯನ್ನು ಸಮರ್ಥವಾಗಿ ಪ್ರಸ್ತುತಪಡಿಸಿದರು.ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಪೀಠಿಕಾ ವಾಚನ ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಅಧ್ಯಕ್ಷತೆ ವಹಿಸಿದ್ದ ತಿಕೋಟಾ ತಹಶೀಲ್ದಾರ್ ಸುರೇಶ ಚವಲರ್ ಮಾತನಾಡಿ, ಯುವ ಸಂಸತ್ ಕೇವಲ ಅಣಕು ಪ್ರದರ್ಶನವಲ್ಲ; ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರ ಮನಸ್ಸಿನಲ್ಲಿ ಬಿತ್ತುವ ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿ…


