ಪ್ರತಿಯೊಬ್ಬರ ಕೈಯಲ್ಲಿ ಒಂದು ಗಿಡ, ಪರಿಸರ ರಕ್ಷಣೆಗೆ ಸಂಕಲ್ಪ
‘ಒನ್ ಕೆಡೆಟ್ ಒನ್ ಟ್ರೀ’ ಅಭಿಯಾನಕ್ಕೆ ಕರ್ನಲ್ ವಂಶಿ ಕರೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 26 :ಪರಿಸರ ಸಂರಕ್ಷಣೆ ಸರ್ಕಾರವೊಂದರ ಹೊಣೆಗಾರಿಕೆಯಲ್ಲ; ಪ್ರತಿಯೊಬ್ಬ ನಾಗರಿಕನೂ ತನ್ನ ಜವಾಬ್ದಾರಿಯನ್ನು ಅರಿತು ಗಿಡ ನೆಟ್ಟು, ಅದನ್ನು ಮರವಾಗಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು 36 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ವಂಶಿ ಕರೆ ನೀಡಿದರು.ನಗರದ ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಮಹಾವಿದ್ಯಾಲಯ ಹಾಗೂ…


