ಕನ್ನೂರ ಜೋಡಿ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ, ಪರಾರಿಯಾಗಲು ಯತ್ನಿಸಿದ ಓರ್ವ ಆರೋಪಿ ಮೇಲೆ ಫೈರಿಂಗ್
ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ತಾಲೂಕಿನ ಕನ್ನೂರು ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಮೇಲೆ ಬೈಕ್ ಹಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಸಾಗರ ಬೆಳ್ಳುಂಡಗಿ ಹಾಗೂ ಇಸಾಕ್ ಖರೇಷಿ ಕೊಲೆ ಮಾಡಿದ ಆರೋಪಿಗಳ ಪೈಕಿ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.ಆರೋಪಿ ಅಕ್ಷಯ ಶಿವಾನಂದ ಜುಲಜುಲೆ ಪೊಲೀಸರ ಮೇಲೆ ಬೈಕ್ ಹಾಯಿಸಿ ಪರಾರಿಯಾಗಲು ಯತ್ನ ನಡೆಸಿದ.ಆಗ ವಿಜಯಪುರ…


