ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅಗತ್ಯ: ಡಾ. ಆನಂದ
ಸಪ್ತಸಾಗರ ವಾರ್ತೆ, ವಿಜಯಪುರ ಜ.3: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಆಯೋಜಿಸಲಾದ ಸಿರಿಧಾನ್ಯ ನಡಿಗೆ (ವಾಕಥಾನ್) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆನಂದ ಕೆ. ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅತ್ಯಗತ್ಯವಾಗಿದೆ. ಸಿರಿಧಾನ್ಯ ಆಹಾರ ಬಳಕೆ ಮಾಡಬೇಕು.ಮಧುಮೇಹ, ರಕ್ತದೊತ್ತಡದಂತಹ ರೋಗಗಳಿಗೆ ಒಳಗಾಗುವುದನ್ನು ಕಾಣುತ್ತಿದ್ದೇವೆ. ಇಂತಹ ರೋಗಗಳಿಂದ ದೂರ ಉಳಿಯಲು ಸಿರಿಧಾನ್ಯಗಳು ಅತ್ಯಂತ ಸಹಕಾರಿ ಆಗಿವೆ ಎಂದು ಹೇಳಿದರು.ನಮ್ಮ ಹಿರಿಯರ ಆಹಾರ…


