
ಏರೋಸ್ಪೇಸ್ ಪಾರ್ಕ್ ಉತ್ತರ ಕರ್ನಾಟಕದಲ್ಲಿ ಸ್ಥಾಪಿಸಿ: ಶಂಕರಗೌಡ ಬಿರಾದಾರ ಆಗ್ರಹ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 21 :ರಾಜ್ಯ ಸರ್ಕಾರ ದೇವನಹಳ್ಳಿ ಬಳಿ ಭೂಸ್ವಾಧೀನ ರದ್ದುಪಡಿಸಿದ ಹಿನ್ನಲೆಯಲ್ಲಿ ಉದ್ದೇಶಿತ ಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕೆಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಸರ್ಕಾರವನ್ನು ಆಗ್ರಹಿಸಿದ್ದಾರೆಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕದ ಯಾವುದಾದರೂ ಜಿಲ್ಲೆಯಲ್ಲಿ ಸ್ಥಾಪನೆ ಮಾಡಿದರೆ ಪ್ರಾದೇಶಿಕ ಅಸಮತೋಲನ ಕಡಿಮೆಯಾಗಲಿದೆ. ವೈಮಾನಿಕ ಸಂಶೋಧನೆ ಉತ್ಪಾದನೆ ರಿಪೇರಿ ರಕ್ಷಣೆ ವಿಭಾಗ ವಿಶೇಷವಾಗಿ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳ ಬಾಗಿಲನ್ನೇ ತೆರೆವುಯುವ ಏರೊಸ್ಪೇಸ್ ಪಾರ್ಕನ್ನು ಯಾವುದೇ…