ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು
ಸಪ್ತಸಾಗರ ವಾರ್ತೆ,ವಿಜಯಪುರ, ಆ.1:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವೃಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ (ಆ. 2) ಭಾನುವಾರ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 24434 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ವಿಜಯಪುರ ನಗರ-55, ತಿಕೋಟಾ ನಗರ-03 ಸೇರಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ವಿಜಯಪುರ ಗ್ರಾಮೀಣ ಭಾಗದ ಕವಲಗಿಯಲ್ಲಿ 2 ಹಾಗೂ ತಿಡಗುಂದಿಯಲ್ಲಿ 1 ಸೇರಿದಂತೆ ಒಟ್ಟು…


