ಹಿರಿಯ ನಾಗರಿಕರು ಸಮಾಜದ ಆಸ್ತಿ; ಅವರ ಅನುಭವ ಕಿರಿಯರಿಗೆ ಮಾರ್ಗದರ್ಶಿ: ನ್ಯಾಯಾಧೀಶ ಅರವಿಂದ ಹಾಗರಗಿ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17: ಹಿರಿಯ ನಾಗರಿಕರು ತಮ್ಮ ಸುದೀರ್ಘ ಜೀವನದ ಅನುಭವ ಹಾಗೂ ಜ್ಞಾನವನ್ನು ಕಿರಿಯರೊಂದಿಗೆ ಹಂಚಿಕೊಳ್ಳುವ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ ಹೇಳಿದರು.ನಗರದ ಕನಕದಾಸ ಬಡಾವಣೆಯ ಈಜುಕೊಳದ ಬಳಿಯ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…


