ಹಿರಿಯರ ಜೀವನಾನುಭವ ಕಿರಿಯರಿಗೆ ಸದಾ ಮಾರ್ಗದರ್ಶಿ— ಅರವಿಂದ ಹಾಗರಗಿ
ಸಪ್ತಸಾಗರ ವಾರ್ತೆ,ವಿಜಯಪುರ, ಅ.1: ಹಿರಿಯ ನಾಗರಿಕರು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು, ಅವರ ಜೀವನಾನುಭವ, ಜ್ಞಾನ ಮತ್ತು ಮಾರ್ಗದರ್ಶನ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ‘ದೀರ್ಘಾಯುಷ್ಯದ ಯುಗ, ಸುದೀರ್ಘ ಜೀವನಕ್ಕಾಗಿ ಜೀವನಕ್ರಮಗಳ ಮರುಚಿಂತನೆ’ ಧ್ಯೇಯವಾಕ್ಯದಡಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಯುವಜನತೆ ಹಿರಿಯರ ಅನುಭವ ಹಾಗೂ ಜೀವನ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಅವರನ್ನು…


