
ರಫ್ತು ಗುಣಮಟ್ಟದ ಒಣದ್ರಾಕ್ಷಿ ಉತ್ಪಾದನೆಗೆ ಮಾರ್ಗಸೂಚಿ:ಅಪಘಾನಿಸ್ತಾನದ ತಳಿ ಆಮದಿಗೆ ಚಿಂತನೆ- ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 28 : ರಾಸಾಯನಿಕ ಬಳಕೆಗೆ ಬದಲಾಗಿ ವಿಷಮುಕ್ತವಾಗಿ ಹಾಗೂ ಯುರೋಪಿಯನ್ ರಾಷ್ಟ್ರಗಳಿಗೆ ಸಾಗಿಸಲು ರಫ್ತು ಗುಣಮಟ್ಟದ ಒಣ ದ್ರಾಕ್ಷಿ ಬೆಳೆಯಲು ಮಾರ್ಗಸೂಚಿ ರೂಪಿಸುವ ಅಗತ್ಯವಿದೆ. ಜೊತೆಗೆ ಅಧಿಕ ಇಳುವರಿ, ವಿಶಿಷ್ಟ ಸ್ವಾದ ಹೊಂದಿರುವ ಅಪಘಾನಿಸ್ತಾನ ರಾಷ್ಟ್ರದ 5-6 ದ್ರಾಕ್ಷಿ ತಳಿಗಳನ್ನು ಪರಿಚಯಿಸಲು ಯೋಜಿಸುವ ಕುರಿತು ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ನಡೆದ ದಕ್ಷಿಣ ಭಾರತದ ದ್ರಾಕ್ಷಿ ಬೆಳೆಗಾರರ ಸಭೆಯಲ್ಲಿ ನಿರ್ಧರಿಸಲಾಯಿತು.ಭಾನುವಾರ ಸಂಜೆ…