ದೇಶಕ್ಕೆ ರೈತ ಹಿತರಕ್ಷಿಸುವ ಪ್ರಧಾನಿ ಬೇಕಿದೆ-ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 4: ದೇಶಕ್ಕೆ ಪ್ರಸ್ತುತ ಸಂದರ್ಭದಲ್ಲಿ ಬಾಯಿ ಮಾತಿನ ಘೋಷಣೆಗೆ ಸೀಮಿತಕ್ಕಿಂತ ರೈತರ ಸಂಕಷ್ಟಗಳಿಗೆ ಸ್ಪಂದಿಸಿ, ನೊಂದ ರೈತರ ಕಣ್ಣೀರು ಒರೆಸುವ ಪ್ರಧಾನಿ ಬೇಕಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಶನಿವಾರ ರಾತ್ರಿ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದ ರೈತರು ಕೆಲವೇ ವರ್ಷಗಳ ಹಿಂದೆ 370 ದಿನಕ್ಕೂ ಹೆಚ್ಚು ದಿನ ಹೋರಾಟ…


