ರೈತರಿಗೆ ಎಕರೆಗೆ ₹25 ಸಾವಿರ ಪರಿಹಾರ ನೀಡಿ: ಭೀಮ್ ರಾಜ್ಯ ದಲಿತ ಸೇವಾ ಸಮಿತಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 17:ಮಳೆಯ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಬರಪೀಡಿತ ಪ್ರದೇಶಗಳ ರೈತರಿಗೆ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ಆಗ್ರಹಿಸಿದೆ.ಸಮಿತಿಯ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ನೀಲಾಂಬಿಕಾ ಕಟ್ಟಿಮನಿ ಹಾಗೂ ರಾಜ್ಯ ಅಲ್ಪಸಂಖ್ಯಾತರ ಮಹಿಳಾ ಘಟಕದ ಅಧ್ಯಕ್ಷೆ ಸಲ್ಮಾ ಮೈರಾಗೋಳ ನೇತೃತ್ವದಲ್ಲಿ ಈ ಬೇಡಿಕೆ ಮುಂದಿಡಲಾಗಿದೆ.ಬೀಜ, ಗೊಬ್ಬರ, ಔಷಧಿ ಹಾಗೂ ಕೃಷಿ ಕಾರ್ಮಿಕರ ವೆಚ್ಚ ಹೆಚ್ಚಿರುವ ಸಂದರ್ಭದಲ್ಲಿ…

Read More

371(ಜೆ) ಸ್ಥಾನಮಾನ, ರೈತರ ಬೇಡಿಕೆ ಈಡೇರಿಸಲು ದೊಡಮನಿ ಆಗ್ರಹ

ಸಪ್ತಸಾಗರ ವಾರ್ತೆ,ದೇವರಹಿಪ್ಪರಗಿ, ಅ. 14:ವಿಜಯಪುರ ಜಿಲ್ಲೆಯನ್ನು 371(ಜೆ) ಅಡಿಯಲ್ಲಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಸ್ಥಗಿತಗೊಂಡಿರುವ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕೂಡಲೇ ಮರುಚಾಲನೆಗೊಳಿಸಿ ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ತಲುಪಿಸಬೇಕು ಎಂದು ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೆಮ್ಮ ಮಾನಪ್ಪ ದೊಡಮನಿ ಸರ್ಕಾರವನ್ನು ಆಗ್ರಹಿಸಿದ್ದಾರೆ.ವಿಜಯಪುರ ಜಿಲ್ಲೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು 371(ಜೆ) ವಿಶೇಷ ಸ್ಥಾನಮಾನ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ಒಳಪಡಿಸಲು ಸರ್ಕಾರ ತುರ್ತು…

Read More

ಕಬ್ಬಿಗೆ ನ್ಯಾಯಯುತ ಬೆಲೆ ಆಗ್ರಹಿಸಿ ರೈತರ ಹೋರಾಟ ತೀವ್ರ

ಯಲಗೂರ ಕ್ರಾಸ್‌ನಲ್ಲಿ ಹೆದ್ದಾರಿ ತಡೆ; 700ಕ್ಕೂ ಹೆಚ್ಚು ರೈತರ ಪ್ರತಿಭಟನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 13: ಕಬ್ಬಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ.ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ಮಂಗಳವಾರ 700ಕ್ಕೂ ಹೆಚ್ಚು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕಬ್ಬಿಗೆ ಹೆಚ್ಚಿನ ದರ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಹಾಗೂ…

Read More

ರೈತರಿಗೆ ₹25 ಸಾವಿರ ಪರಿಹಾರ ನೀಡಿ; ₹2,500 ಬೇಡ

ಸರ್ಕಾರದ ಆರ್ಥಿಕ ಸ್ಥಿತಿಗೆ ಶ್ವೇತಪತ್ರ ಹೊರಡಿಸಲು ರೈತ ಸಂಘ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಅ.1: ರಾಜ್ಯದ ರೈತರ ಸಂಕಷ್ಟಕ್ಕೆ ಸರ್ಕಾರ ಕೂಡಲೇ ಸ್ಪಂದಿಸಿ, ಪ್ರತಿ ಎಕರೆಗೆ ಕನಿಷ್ಠ ₹25 ಸಾವಿರ ಪರಿಹಾರ ನೀಡಬೇಕು. ₹2,500 ಇನ್‌ಪುಟ್ ಸಬ್ಸಿಡಿ ನೀಡುವ ಮೂಲಕ ರೈತರನ್ನು ಅವಮಾನಿಸಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.ರೈತರು ಬೀಜ, ಗೊಬ್ಬರ, ಕೂಲಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಮಾಡಿರುವ ಸಂಪೂರ್ಣ ವೆಚ್ಚವನ್ನು ಪರಿಗಣಿಸಿ ವೈಜ್ಞಾನಿಕವಾಗಿ ಪರಿಹಾರ ನಿಗದಿಪಡಿಸಬೇಕು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…

Read More

ಬರದ ಹೊಡೆತಕ್ಕೆ ರೈತರು ಕಂಗಾಲು: ತಕ್ಷಣ ಬರಪೀಡಿತ ಪ್ರದೇಶ ಘೋಷಿಸಿ

ಕುಡಿಯುವ ನೀರು, ಮೇವು, ಬೆಳೆಹಾನಿ ಪರಿಹಾರಕ್ಕೆ ಜೆಡಿಎಸ್ ಆಗ್ರಹ ಸಪ್ತಸಾಗರ ವಾರ್ತ,ವಿಜಯಪುರ, ಸೆ. 25: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಬರದ ತೀವ್ರತೆ ಹೆಚ್ಚಿರುವ ತಾಲೂಕು ಹಾಗೂ ಗ್ರಾಮಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ನಗರ ಜನತಾದಳ (ಜಾತ್ಯತೀತ) ಆಗ್ರಹಿಸಿದೆ.ಈ ಕುರಿತು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಪ್ರಶಾಂತ ಎಸ್. ಕಿಣಗಿ ಅವರ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು…

Read More

ಸಹಕಾರಿ ಬ್ಯಾಂಕುಗಳು ರೈತರ ಪಾಲಿಗೆ ವರದಾನ:ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16:ಸಹಕಾರಿ ಬ್ಯಾಂಕುಗಳು ರೈತರ ಪಾಲಿಗೆ ವರದಾನವಾಗಿವೆ ಎಂದು ಮಾಜಿ‌ ಸಚಿವ, ಬಸವನ ಬಾಗೇವಾಡಿ ಶಾಸಕ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ‌ ಕಾತ್ರಾಳ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.ಬಡವರಿಗೆ ಸಾಲ ಸಿಗುವುದು ಪ್ರಾಥಮಿಕ ಸಹಕಾರಿ ಸಂಘದಲ್ಲಿ ಮಾತ್ರ. ಸಣ್ಣ ರೈತರಿಗೆ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ಕೊಡಲ್ಲ. ಕಷ್ಟದಲ್ಲಿದ್ದಾಗಲೂ ಸಹಕಾರಿ ಸಂಘಗಳ ಸಾಲ ಮನ್ನಾ ಆಗಿ ಅದೆಷ್ಟೋ…

Read More

ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಬದ್ಧ: ಎಂ.ಬಿ. ಪಾಟೀಲ

ವಿಜಯಪುರ ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಬೆಳೆ ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಪ್ತಸಾಗರ ವಾರ್ತೆ,ವಿಜಯಪುರ, ಆ.16 : ತೀವ್ರ ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ಎದುರಾಗಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಭಾನುವಾರ ಜಿಲ್ಲೆಯ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು.ಇಂಡಿ ತಾಲೂಕಿನ ಹೊರ್ತಿ ಗ್ರಾಮದ ರೈತ ಮಾಳಪ್ಪ ಸೊನಕನಹಳ್ಳಿ ಅವರ ಆರು…

Read More

ಬರದ ಬೇಗುದಿಗೆ ಸ್ಪಂದನೆ: ರೈತರಿಗೆ ಗರಿಷ್ಠ ಪರಿಹಾರಕ್ಕೆ ವೈಜ್ಞಾನಿಕ ವರದಿ ಶೀಘ್ರ ಸಲ್ಲಿಸಿ

ಎರಡನೇ ದಿನವೂ ಬರಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ. ಪಾಟೀಲ ಭೇಟಿ; ತೊಗರಿ, ಮೆಕ್ಕೆಜೋಳ, ಈರುಳ್ಳಿ ಬೆಳೆ ಪರಿಶೀಲನೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.10 :ಜಿಲ್ಲೆಯಲ್ಲಿ ತೀವ್ರ ಬರಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಸ್ಪಂದಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು, ರೈತರಿಗೆ ಸರ್ಕಾರದಿಂದ ಗರಿಷ್ಠ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಬೆಳೆ ಹಾನಿಯ ವೈಜ್ಞಾನಿಕ ವರದಿಯನ್ನು ತ್ವರಿತವಾಗಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲೆಯ ಬರಪರಿಸ್ಥಿತಿ ಹಾಗೂ ಬೆಳೆ…

Read More

ಬರದ ಬಿಗಿ ಮುಷ್ಟಿಗೆ ವಿಜಯಪುರ ರೈತ

ಶೇ.17ರಷ್ಟು ಮಾತ್ರ ಬಿತ್ತನೆ; ಪೈರು ಒಣಗುವ ಹಂತಕ್ಕೆ | ಗರಿಷ್ಠ ಪರಿಹಾರಕ್ಕೆ ವೈಜ್ಞಾನಿಕ ವರದಿ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯಪುರ ಜಿಲ್ಲೆಯಲ್ಲಿ ಬರದ ಆತಂಕ ಗಂಭೀರವಾಗಿದ್ದು, ಬಿತ್ತನೆ ಮಾಡಿರುವ ಪೈರುಗಳು ಒಣಗುವ ಹಂತ ತಲುಪಿವೆ. ಜಿಲ್ಲೆಯಾದ್ಯಂತ ಈವರೆಗೆ ಕೇವಲ ಶೇ.17ರಷ್ಟು ಮಾತ್ರ ಬಿತ್ತನೆಯಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಬಿತ್ತನೆಯೇ ನಡೆದಿಲ್ಲ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಲಿದ್ದು, ಗರಿಷ್ಠ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ನಿಖರ ಹಾಗೂ ವೈಜ್ಞಾನಿಕ ವರದಿ ಸಿದ್ಧಪಡಿಸುವಂತೆ…

Read More

“ಒಣದ್ರಾಕ್ಷಿ ಹರಾಜಿಗೆ ಆನ್‌ಲೈನ್ ಟಚ್” ₹5 ಕೋಟಿಯಿಂದ ₹12 ಕೋಟಿಗೆ ವಹಿವಾಟು ಜಿಗಿತ; ಪಾರದರ್ಶಕ ಮಾರುಕಟ್ಟೆಯಿಂದ ರೈತರಿಗೆ ಲಾಭ: ಯತ್ನಾಳ

ಸಪ್ತಸಾಗರ ವಾರ್ತೆ | ವಿಜಯಪುರ, ಆ.8:ರೈತರ ಹಿತದೃಷ್ಟಿಯಿಂದ ಪಾರದರ್ಶಕ ವಹಿವಾಟಿಗೆ ಒತ್ತು ನೀಡಿರುವ ಆನ್‌ಲೈನ್ ಟ್ರೇಡಿಂಗ್ ಮಾರುಕಟ್ಟೆಗೆ ವಿಜಯಪುರದ ಒಣದ್ರಾಕ್ಷಿ ವಹಿವಾಟು ವೇಗವಾಗಿ ಶಿಫ್ಟ್ ಆಗುತ್ತಿದ್ದು, ಇದರ ಪರಿಣಾಮ ವಹಿವಾಟಿನ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಈವರೆಗೆ ಸರಾಸರಿ ₹5 ಕೋಟಿಯಷ್ಟಿದ್ದ ವಹಿವಾಟು ಇದೀಗ ₹12 ಕೋಟಿಗೆ ಏರಿಕೆಯಾಗಿದ್ದು, ರೈತರಿಗೆ ಸ್ಪರ್ಧಾತ್ಮಕ ಬೆಲೆ ದೊರೆಯುವ ವಾತಾವರಣ ನಿರ್ಮಾಣವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.ವಿಜಯಪುರದಲ್ಲಿ ಒಣದ್ರಾಕ್ಷಿ ಆನ್‌ಲೈನ್ ಟ್ರೇಡಿಂಗ್ ಮಾರುಕಟ್ಟೆ ಆರಂಭಗೊಂಡಿದ್ದರೂ, ಕೆಲವರು ಖಾಸಗಿ…

Read More