ಬರ ಘೋಷಣೆಗೆ ಜೆಡಿಎಸ್ ಒತ್ತಾಯ:ರೈತರ ಸಾಲಮನ್ನಾ, ಕಾಲುವೆಗಳಿಗೆ ನೀರು ಹರಿಸದಿದ್ದರೆ ಹೋರಾಟದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಮಳೆ ಕೈಕೊಟ್ಟು ಮುಂಗಾರು ಬೆಳೆ ಸಂಪೂರ್ಣ ನೆಲಕಚ್ಚಿರುವ ಬೆನ್ನಲ್ಲೇ ವಿಜಯಪುರ ಜಿಲ್ಲೆಯಲ್ಲಿ ರೈತರ ಸಂಕಷ್ಟ ತೀವ್ರಗೊಂಡಿದೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರ ಸಾಲ ಮನ್ನಾ ಮಾಡಬೇಕು, ಜಾನುವಾರುಗಳಿಗೆ ಮೇವು ಒದಗಿಸಬೇಕು ಹಾಗೂ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಡಿಗೇರಿ ಸರ್ಕಾರವನ್ನು ಒತ್ತಾಯಿಸಿದರು.ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರು ಹಾಗೂ ತಾಲೂಕು ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ರೈತರು ಸಂಕಷ್ಟದಲ್ಲಿರುವಾಗ…

Read More

ಜಿಲ್ಲೆಯ ಸಮಗ್ರ ನೀರಾವರಿಗೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

ಸಿಎಂಗೆ ಮನವಿ ಸಲ್ಲಿಕೆ – ಬಾಕಿ ನೀರಾವರಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಲು ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಆ. 4:ಜಿಲ್ಲೆಯ ಸಮಗ್ರ ನೀರಾವರಿ ಅಭಿವೃದ್ಧಿಗೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ ಹಾಗೂ ವಿಜಯಪುರ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಶ್ರೀ ಸಿದ್ಧರಾಮೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು.ಬಳಿಕ ರೈತರು ಒಂದು…

Read More

25ನೇ ವರ್ಷದ ಗಂಗಾಪೂಜೆಗೆ ಮಹಾಬಳೇಶ್ವರದತ್ತ ಉತ್ತರ ಕರ್ನಾಟಕದ ರೈತರ ಮಹಾಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28: ಉತ್ತರ ಕರ್ನಾಟಕದ ಜೀವನಾಡಿಯಾದ ಕೃಷ್ಣಾ ನದಿಯ ಉಗಮಸ್ಥಳ ಮಹಾರಾಷ್ಟ್ರದ ಮಹಾಬಳೇಶ್ವರದಲ್ಲಿ ಬುಧವಾರ ನಡೆಯಲಿರುವ 25ನೇ ವರ್ಷದ ನಿರಂತರ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ 100ಕ್ಕೂ ಅಧಿಕ ರೈತರು, ರೈತ ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ಮಹಾಬಳೇಶ್ವರದತ್ತ ಪ್ರಯಾಣ ಬೆಳೆಸಿದರು.ವಿಜಯಪುರ ನಗರದ ಹೊಸ ಪ್ರವಾಸಿ ಮಂದಿರದಿಂದ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ ವಿಶೇಷ ವಾಹನಗಳಲ್ಲಿ ರೈತರ ತಂಡವನ್ನು ಬೀಳ್ಕೊಡಲಾಯಿತು….

Read More

ಕಬ್ಬು ನುರಿಸುವ ಸಾಮರ್ಥ್ಯ 12 ಸಾವಿರ ಟಿಸಿಡಿಗೆ ಹೆಚ್ಚಳ: ಸಾರ್ವಜನಿಕ ಸಭೆಯಲ್ಲಿ ರೈತರ ಬೆಂಬಲ

ಸಪ್ತಸಾಗರ ವಾರ್ತೆ,ಚಡಚಣ, ಜು. 24: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಾವಿನಾಳ ಗ್ರಾಮದಲ್ಲಿರುವ ಶ್ರೀ ದತ್ತ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಸಾಮರ್ಥ್ಯ ಹೆಚ್ಚಳ ಯೋಜನೆ ಕುರಿತು ಸಾರ್ವಜನಿಕ ಸಭೆ ಬುಧವಾರ ಕಾರ್ಖಾನೆ ಆವರಣದಲ್ಲಿ ನಡೆಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಔದ್ರಮ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರು ಯೋಜನೆಗೆ ವ್ಯಾಪಕ ಬೆಂಬಲ ವ್ಯಕ್ತಪಡಿಸಿದರು.ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವಿಜಯಪುರ ಪ್ರಾದೇಶಿಕ ಅಧಿಕಾರಿ ಎಸ್. ರಮೇಶ್ ಮಾತನಾಡಿ,…

Read More

ಮಳೆಗಾಲದಲ್ಲೂ ಬೇಸಿಗೆಯ ದಾಹ: ಮಳೆಯಿಲ್ಲದೆ ಕಂಗಾಲಾದ ರೈತರು, ಬಿಸಿಗಾಳಿಗೆ ತತ್ತರಿಸಿದ ಜನಜೀವನ

ವಿಶೇಷ ವರದಿಸಪ್ತಸಾಗರ ವಾರ್ತೆ, ವಿಜಯಪುರ, ಜೂ. 21:ಸಾಮಾನ್ಯವಾಗಿ ಜೂನ್ ತಿಂಗಳು ಆರಂಭವಾಗುತ್ತಿದ್ದಂತೆಯೇ ಮಳೆಗಾಲದ ವಾತಾವರಣ ನಿರ್ಮಾಣವಾಗಿ ಜನರಿಗೆ ಬೇಸಿಗೆಯ ಬಿಸಿಲಿನಿಂದ ನಿರಾಳತೆ ಸಿಗಬೇಕು. ಆದರೆ ಈ ಬಾರಿ ಜಿಲ್ಲೆಯಾದ್ಯಂತ ಚಿತ್ರಣವೇ ಬೇರೆಯಾಗಿದೆ. ರೋಹಿಣಿ ಮತ್ತು ಮೃಗಶಿರ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದು, ಮತ್ತೊಂದೆಡೆ ಮಳೆಗಾಲದಲ್ಲೂ ಮುಂದುವರಿದಿರುವ ತೀವ್ರ ಉಷ್ಣಾಂಶ ಜನಜೀವನವನ್ನು ಹೈರಾಣಗೊಳಿಸಿದೆ. ಕೈ ಎತ್ತಿ ಆಕಾಶ ನೋಡುವ ರೈತರು ರೋಹಿಣಿ ಮತ್ತು ಮೃಗಶಿರ ಮಳೆ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಈ…

Read More

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ ತರಬೇತಿಗೆ ವಿಜಯಪುರ ರೈತರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದೆ.ನಿನ್ನೆ ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್‌ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ…

Read More

ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ನೆನೆಗುದಿಗೆ: ರೈತ ಸಂಘ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 : ಬೂದಿಹಾಳ : ಪೀರಾಪೂರ ಏತ ನೀರಾವರಿ ಯೋಜನೆಯ ಬಾಕಿ ಉಳಿದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಧರಣಿ ಸಂದರ್ಭದಲ್ಲಿ ನೀಡಿದ ಭರವಸೆ ಕೇವಲ ಮೂಗಿಗೆ ತುಪ್ಪ ಸವರಿ ಹೋದಂತಾಗಿದೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಇವರು ಕೇವಲ ಭರವಸೆ ನೀಡುತ್ತಾ ರೈತರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ ಸಚಿವರ ವಿರುದ್ಧ…

Read More

ಹಳ್ಳ-ಕೊಳ್ಳ ಒತ್ತುವರಿ ತೆರವುಗೊಳಿಸಿ, ಸಹಕರಿಸಿ: ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 19:ಬಬಲೇಶ್ವರ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಬಹುತೇಕ ಗ್ರಾಮಗಳಲ್ಲಿ ಹಳ್ಳ-ಕೊಳ್ಳಗಳು ಒತ್ತುವರಿಯಾಗಿವೆ. ರೈತರು ಸ್ವಯಂ ಪ್ರೇರಣೆಯಿಂದ ಹಳ್ಳ ಒತ್ತುವರಿ ತೆರುವುಗೊಳಿಸಬೇಕು. ಅಲ್ಲಿ ಬೆಳೆದಿರುವ ಗಿಡ-ಗಂಟಿ ತೆಗೆದು ಸಹಕರಿಸಿದರೆ ಹಳ್ಳ ತುಂಬಿಸುವ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟದ ಹೊಳೆಯನ್ನೇ ಹರಿಸುವೆ ಎಂದು ಬೃಹತ್‌ ಮತ್ತು ಮಧ್ಯಮ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಬಬಲೇಶ್ವರ ತಾಲೂಕಿನ ನಿಡೋಣಿ- ಯಕ್ಕುಂಡಿ-ನಾಗರಾಳ- ಕುಮಠೆ-ಅರ್ಜುಣಗಿ…

Read More

ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರ ಹಮ್ಮಿಕೊಳ್ಳಿ : ಶಿವಪ್ಪಗೌಡ ಬಿರಾದಾರ

ಸಪ್ತಸಾಗರ ವಾರ್ತೆ,ಸಿಂದಗಿ, ಏ. 19: ರೈತರ ಹಿತಾಸಕ್ತಿ, ಕೃಷಿ ಅಭಿವೃದ್ಧಿಗೆ ಪೂರಕ ಕಾರ್ಯಾಗಾರವನ್ನು ಆಯೋಜಿಸಬೇಕು ಎಂದು ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ ಹೇಳಿದರು.ನಗರದಲ್ಲಿನ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ತಾಲೂಕಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಮತ್ತು ಸಮಗ್ರ ಪೋಷಕಾಂಶ ನಿರ್ವಹಣೆಯ ಮಹತ್ವ, ತಾಲೂಕಿನಲ್ಲಿ ಕಬ್ಬಿನ ಕ್ಷೇತ್ರ ಹೆಚ್ಚಾಗಿದ್ದು ಕಬ್ಬಿನ ಬೆಳೆಗೆ ನೀರು ನಿರ್ವಹಣೆ ಮುಂತಾದ ವಿಷಯಗಳ ಬಗ್ಗೆ ಜಾಗೃತಿ…

Read More

ಅನ್ನದಾತನ ಬದುಕು ಬದಲಿಸುವ ಬಜೆಟ್-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಅನ್ನು ಸಚಿವ ಶಿವಾನಂದ ಪಾಟೀಲ ಸ್ವಾಗತಿಸಿದ್ದಾರೆ.ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ…

Read More