11 ಗಂಟೆಯಲ್ಲಿ 20 ಎಕರೆ ಜಮೀನು ಹರಗಿದ ಎತ್ತುಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:11 ಗಂಟೆಗಳಲ್ಲಿ ನಿರಂತರವಾಗಿ 20 ಎಕರೆ ಹೊಲವನ್ನು ಹರಗಿ ಎತ್ತುಗಳು ಸಾಧನೆ ಮಾಡಿದ ಅಪರೂಪದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುದುರಿ ಸಾಲವಾಡಗಿ ಗ್ರಾಮದಲ್ಲಿ ನಡೆದಿದೆ.ಕುದುರಿ ಸಾಲವಾಡಗಿ ಗ್ರಾಮದ ಗುರುಸ್ವಾಮಿ ಚಿಕ್ಕಮಠ ಅವರ ಎತ್ತುಗಳು ಜಾಗೀರದಾರ ಅವರ ಹೊಲದಲ್ಲಿ ಬೆಳಿಗ್ಗೆ 6 ಗಂಟೆಯಿಂದ 4 ಗಂಟೆಯವರೆಗೆಬಿಡದೆ 20 ಎಕರೆ ಜಮೀನು ಹರಗಿ ಸಾಧನೆ ಮಾಡಿವೆ.ಸಾಧನೆ ಮಾಡಿದ ಎತ್ತುಗಳನ್ನು ರೈತರು ಗ್ರಾಮದಲ್ಲಿ ಮೆರವಣಿಗೆ ಮಾಡಿ ಸಂತೋಷ ಹಂಚಿಕೊಂಡರು.ಈ ಸಂದರ್ಭದಲ್ಲಿ ಎತ್ತುಗಳ…

Read More

ಭೀಮಶಿ ಅಗಲಿಕೆಯಿಂದ ರೈತಪರ ಧ್ವನಿ ಕ್ಷೀಣ : ಶಿವಾನಂದ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 28 :ಜಿಲ್ಲೆಯ ನೀರಾವರಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಚಪ್ಪಲಿ ಹಾಕದೇ ಬದ್ಧತೆಯ ಹೋರಾಟ ನಡೆಸಿದ್ದ ರೈತ, ಕಾರ್ಮಿಕ ನಾಯಕ ಭೀಮಶಿ ಕಲಾದಗಿ ಅವರಿಲ್ಲದ ವಿಜಯಪುರ ಜಿಲ್ಲೆಯಲ್ಲಿ ರೈತ ಕಾರ್ಮಿಕ ಧ್ವನಿ ಕ್ಷೀಣಿಸಿದಂತಾಗಿದೆ. ಹೋರಾಟಕ್ಕೆ ಮತ್ತೊಂದು ಹೆಸರೇ ಭೀಮಶಿ ಕಲಾದಗಿ ಎಂಬಂತಾಗಿದ್ದು ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.ಸೋಮವಾರ ಇಂಡಿ ತಾಲೂಕಿನ ಹಂಜಗಿ ಗ್ರಾಮದ ತೋಟದ ವಸ್ತಿಯಲ್ಲಿ ರೈತ-ಕಾರ್ಮಿಕ ನಾಯಕ ಭೀಮಶಿ…

Read More

ಬೂದಿಹಾಳ- ಪೀರಾಪುರ ಯೋಜನೆ ಕಾಮಗಾರಿಗೆ ಆಗ್ರಹಿಸಿ ಕೈಗೊಂಡ ರೈತರ ಧರಣಿ ಅಂತ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ.‌ ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…

Read More