
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ‘ಕನಕರಾಜ’ ಸಿನಿಮಾ ಪೋಸ್ಟರ್ ಬಿಡುಗಡೆ
ಸಪ್ತಸಾಗರ ವಾರ್ತೆ, ಬೆಂಗಳೂರು,ಆ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸೋಮವಾರ “ಕನಕರಾಜ” ಸಿನಿಮಾದ ಪೋಸ್ಟರ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿನಿಮಾದ ಯಶಸ್ಸಿಗೆ ಹಾರೈಸಿ ಶುಭ ಕೋರಿದರು.ಮಾಜಿ ಸಚಿವ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಮತ್ತು ಸಿನಿಮಾ ತಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.