ಜಿಲ್ಲೆಯಲ್ಲಿ ಬರ ಎದುರಿಸಲು ಸನ್ನದ್ಧ: ಸಚಿವ ಎಂ.ಬಿ. ಪಾಟೀಲಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ; ವಿಜಯಪುರ ವಿಮಾನ ನಿಲ್ದಾಣ ಶೀಘ್ರ ಕಾರ್ಯಾರಂಭ

ವಿಜಯಪುರ, ಆ.15: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಎದುರಾಗಬಹುದಾದ ಬರ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ಹಿಂದಿನ ಯೋಜನೆಗಳ ಜೊತೆಗೆ ಹೊಸದಾಗಿ ರೈತ ಮಿತ್ರ, ಗ್ರಾಮಾನುಭವ, ಯುವ…

Read More