ರಾಷ್ಟ್ರಧ್ವಜವು ದೇಶದ ವೈವಿಧ್ಯಮಯ ಸಂಸ್ಕೃತಿಯ ಪ್ರತೀಕ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ರಾಷ್ಟ್ರಧ್ವಜವು ನಮ್ಮ ದೇಶದ ಗೌರವದ ಸಂಕೇತವಾಗಿದೆ. ಇದು ನಮ್ಮ ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ,ದೇಶದ ಪ್ರಗತಿ ಮತ್ತು ಏಕತೆಯನ್ನು ಪ್ರತಿನಿಧಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ‘ರಾಷ್ಟ್ರಧ್ವಜದ ಮಹತ್ವ’ ಕುರಿತ ಚಿಂತನಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ ಹೋರಾಟದ ಮೌಲ್ಯ-ತ್ಯಾಗಗಳನ್ನು ಎತ್ತಿಹಿಡಿಯುತ್ತದೆ. ಅದು ದೇಶದ ಇತಿಹಾಸ, ಸಂಸ್ಕೃತಿ, ಮತ್ತು ಜನರ ಭಾವನೆಗಳನ್ನು ಪ್ರತಿನಿಧಿಸುತ್ತದೆ…

Read More