ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ

ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

Read More

ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ…

Read More

ಡೋಣಿ ನದಿಗೆ ಜಿಲ್ಲಾಧಿಕಾರಿ ಭೇಟಿ, ಪ್ರವಾಹ ತಡೆಗೆ ಕ್ರಮಗಳ ಕುರಿತು ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಶನಿವಾರ ಜಿಲ್ಲೆಯ ಸಾರವಾಡ ಬಳಿ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲಿಸಿದರು.ಡೋಣಿ ನದಿಯ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಜಿಲ್ಲಾ ಪಂಚಾಯತಿಯ‌ ಮುಖ್ಯ‌ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡದ ಹತ್ತಿರದ ಡೋಣಿ ನದಿಯ ಸೇತುವೆಯ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ ಪ್ರವಾಹ ತಡೆಗೆ ಅನುಸರಿಸಬೇಕಾದ ಕ್ರಮಗಳ…

Read More

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು,…

Read More

ಪ್ರವಾಹ ಪರಿಸ್ಥಿತಿಯಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಿ : ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 7: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಗುರುವಾರ ತಿಕೋಟಾ ಮತ್ತು ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು.ತಿಕೋಟಾ ಪಟ್ಟಣದ ಕೆ.ಜಿ.ಎಸ್ ಶಾಲೆಗೆ ಭೇಟಿ ನೀಡಿ, ಶಾಲೆಯ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದ ಅವರು, ಶಿಥಿಲಾವಸ್ಥೆಗೊಂಡಿರುವ ಶಾಲಾ ಕೊಠಡಿಗಳಲ್ಲಿ ಮಕ್ಕಳಿಗೆ ಪಾಠ ಭೋಧನೆ ಮಾಡದೇ ಪರ್ಯಾಯ ವ್ಯವಸ್ಥೆ ಮಾಡಿಕೊಂಡು ಪಾಠ ಭೋಧನೆ ಮಾಡಲು ಉಸ್ತುವಾರಿ ಸಚಿವರ ನಿರ್ದೇಶನದಂತೆ ಕ್ರಮ ವಹಿಸಬೇಕು. ಶಾಲೆಯಲ್ಲಿನ ಕಂಪ್ಯೂಟರ್ ಗಳನ್ನು…

Read More

ದೋಣಿ ನದಿ ಪ್ರವಾಹ: ಸಾತಿಹಾಳ ಸೇತುವೆ ಜಲಾವೃತ, ರಸ್ತೆ ಸಂಚಾರಕ್ಕೆ ವ್ಯತ್ಯಯ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ಮಳೆ ಅಬ್ಬರ ಕಡಿಮೆಯಾದರೂ ದೋಣಿ ನದಿ ಪ್ರವಾಹ ಇನ್ನು ಇಳಿಕೆಯಾಗಿಲ್ಲ. ಹೆಚ್ಚಾದ ನೀರಿನ ಹರಿವಿನಿಂದ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಬಳಿ ಸೇತುವೆ ಜಲಾವೃತಗೊಂಡಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೀವ್ರ ಅಡಚಣಿಯಾಗಿದೆ.ನಿನ್ನೆ ರಾತ್ರಿ ದೋಣಿ ನದಿ ಉಗಮ ಸ್ಥಾನದಲ್ಲಿ ಭಾರಿ ಪ್ರಮಾಣದ ಮಳೆ ಸುರಿದಿದ್ದರಿಂದ ದೇವರ ಹಿಪ್ಪರಗಿ ತಾಲೂಕಿನಲ್ಲಿ ಹರಿದಿರುವ ದೋಣಿ ನದಿಗೆಇಂದು ಮಳೆ ಕಡಿಮೆಯಾಗಿದ್ದರೂ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಾತಿಹಾಳ ಗ್ರಾಮದ ಬಳಿಯ ಸೇತುವೆ…

Read More