ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಘೋಷಣೆಗೆ ಶಾಸಕ ಯತ್ನಾಳ ಪ್ರಧಾನಿಗೆ ಪತ್ರ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರಕ್ಕಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಪತ್ರ ಬರೆದು ಮನವಿ ಮಾಡಿದ್ದಾರೆ.ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಮತ್ತು ಸ್ಥಳಾಂತರಕ್ಕೆ ಕಾರಣವಾಗಿದೆ. ಭೀಮಾ ನದಿಯ ದಡದಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದ್ದು, ರೈತರು ತಾವು ಬೆಳೆದ ಬೆಳೆಗಳು…


