
ಜಿಲ್ಲೆಯ ಅರಣ್ಯ ಪ್ರದೇಶ ಶೇ.10ರಷ್ಟು ಹೆಚ್ಚಿಸುವ ಗುರಿ -ಸಚಿವ ಎಂ.ಬಿ.ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದ ವಿಜಯಪುರ ಜಿಲ್ಲೆಯಲ್ಲಿ ಪರಿಸರ ಕಾಳಜಿಯೊಂದಿಗೆ ಕೋಟಿ ವೃಕ್ಷ ಅಭಿಯಾನದ ಮೂಲಕ 0.17ರಷ್ಟಿದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ಶೇಕಡಾ 2ರಷ್ಟು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಶುಕ್ರವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಕೈಗಾರಿಕೆ ಇಲಾಖೆ…