ವಿದ್ಯಾರ್ಥಿ ನಾಯಕರಿಗೆ ಪ್ರಮಾಣ ವಚನ: ನಾಯಕತ್ವದಿಂದ ದೇಶ ಕಟ್ಟುವ ಕನಸು – ಡಿವೈಎಸ್ಪಿ ನಾಗರಾಜ ಜಿ.

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13: ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ಪಬ್ಲಿಕ್ ಸಿಬಿಎಸ್‌ಇ ಶಾಲೆಯಲ್ಲಿ ವಿದ್ಯಾರ್ಥಿ ಚುನಾವಣೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಶನಿವಾರ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಜಯಪುರ ನಗರ ಡಿವೈಎಸ್ಪಿ ನಾಗರಾಜ ಜಿ. ಮಾತನಾಡಿ, “ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಹೊಣೆಗಾರಿಕೆಯ ಗುಣಗಳನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂದು ಶಾಲೆಯನ್ನು ಮುನ್ನಡೆಸುವ ಮುಖ್ಯ ಬಾಲಕ-ಬಾಲಕಿಯರು ನಾಳೆ ದೇಶದ ನಾಯಕತ್ವ ವಹಿಸುವ ವ್ಯಕ್ತಿಗಳಾಗಬಹುದು” ಎಂದು…

Read More

ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆ ಅವರ ಜೀವನದ ಅವಿಭಾಜ್ಯ ಅಂಗವಾಗಬೇಕು. ಅವು ಇಡೀ ಜೀವನದ ಯಶಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ನಗರದ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ,…

Read More

ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More

ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…

Read More

ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರ- ಡಾ. ಬನುದೇವಿ ಸಂಕಣ್ಣವರ

ಸಪ್ತ ಸಾಗರ ವಾರ್ತೆ, ವಿಜಯಪುರ,ಡಿ.8: ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಮೂಲಾಧಾರವಾಗಿದ್ದು, ದೇಶದ ಘನತೆ ಸಂಸ್ಕೃತ ಮತ್ತು ಸಂಸ್ಕೃತಿ ಎಂಬ ಎರಡು ಅಸ್ತಿವಾರಗಳಲ್ಲಿ ನಿಂತಿದೆ ಎಂದು ವಿಶ್ರಾಂತ ಉಪನ್ಯಾಸಕಿ ಡಾ. ಬನುದೇವಿ ಸಂಕಣ್ಣವರ ಹೇಳಿದರು.ನಗರದ ಪಿಡಿಜೆ ಹೈಸ್ಕೂಲಿನಲ್ಲಿ ಬೆಂಗಳೂರಿನ ಅಗರಖೇಡ ಪ್ರತಿಷ್ಠಾನ ಮತ್ತು ಇಲ್ಲಿಯ ವಿಜಯಪುರ ಸಂಸ್ಕೃತ ಬಳಗದ ಸಂಯುಕ್ತ ಆಶ್ರಯದಲ್ಲಿ ‘ಸಂಸ್ಕೃತ ಸುಭಾಷಿತ ಸ್ಪರ್ಧೆ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.ಸಂಸ್ಕೃತವು ಅತ್ಯಂತ ವೈಜ್ಞಾನಿಕ ಭಾಷೆಯಾಗಿದ್ದು, ನಾಸಾ ಸಂಶೋಧನೆಗಳಲ್ಲಿ ಸಂಸ್ಕೃತದ ಉಪಯೋಗದ ಸಾಧ್ಯತೆಗಳ ಬಗ್ಗೆ ಉಲ್ಲೇಖ ಮಾಡಲಾಗಿದೆ….

Read More