Free
ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಚಿತ ಯೋಗ ತರಬೇತಿ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 15:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರದಿಂದ ಪ್ರತಿನಿತ್ಯ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವ್ಹಿ.ಎಸ್ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಪ್ರಾರಂಭವಾಗಿದೆ.ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಆಸ್ಪತ್ರೆಯ ಸ್ವಸ್ತವೃತ್ತ ವಿಭಾಗದ ವತಿಯಿಂದ ಹಳೆಯ ವಿದ್ಯಾರ್ಥಿ ಮತ್ತು ವೈದ್ಯರು ಈ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ ಪಾಟೀಲ,…
ಶಾಲಾ ಮಕ್ಕಳಿಗೆ ಉಚಿತ ಕಂಪ್ಯೂಟರ್ ವಿತರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 14:ಸರಕಾರಿ ಶಾಲೆಗಳು ಬೆಳೆಯಬೇಕು ಅಂದಾಗ ಮಾತ್ರ ಬಡ ಮಕ್ಕಳು ಬೆಳೆದು ಸಾಧನೆ ಮಾಡಲು ಸಾಧ್ಯ ಎಂದು ಡಾ.ಎಲ್.ಎಚ್ ಬಿದರಿ ಹೇಳಿದರು.ನಗರದ ಸರಕಾರಿ ಗಂಡು ಮಕ್ಕಳ ಶಾಲೆ ನಂ ೫ ರಲ್ಲಿ ಎಚ್.ಟಿ.ಬಿದರಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಶಾಲೆಯ ಮಕ್ಕಳಿಗೆ ಕಂಪ್ಯೂಟರ್ ಹಾಗೂ ಟೆಬಲ್‌ಗಳ ದೇಣಿಗೆ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಅವರು ಮಾತನಾಡಿದರು.ಇದು ನಾನು ಕಲಿತ ಶಾಲೆ ನನ್ನ ಶಾಲೆ ಮೇಲೆ ನನಗೆ ಹಮ್ಮೆ ಇದೆ. ಅದಕ್ಕಾಗಿ ನಾನು ನಮ್ಮ ಎಚ್.ಟಿ.ಬಿದರಿ…
ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ 20ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9845927110 ಸಂಪರ್ಕಿಸಬಹುದಾಗಿದೆ ಎಂದು…
ಇಬ್ರಾಹಿಂಪುರ ಶಾಲೆಯ ಮಕ್ಕಳಿಗೆ ಉಚಿತವಾಗಿ ಸ್ಮಾರ್ಟ್ ಬೋರ್ಡ್, ನೋಟ್ ಬುಕ್ ವಿತರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 5:ಮುಂಬೈನ ತಾಪಿದಾಸ ತುಳಸಿದಾಸ ವ್ರಜದಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಗರದ ಇಬ್ರಾಹಿಂಪುರ ಬಡಾವಣೆಯ ನಮ್ಮ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಬರ್ 6 ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಮಾರ್ಟ್ ಬೋರ್ಡ ಹಾಗೂ ನೋಟು ಪುಸ್ತಕಗಳನ್ನು ವಿತರಿಸಲಾಯಿತು.ಚಾರಿಟೇಬಲ್ ಟ್ರಸ್ಟ್ ಸಂಯೋಜಕ ವಿಶ್ವನಾಥ ಸಿಂದಗಿ ಅವರು ಸ್ಮಾರ್ಟ್ ಬೋರ್ಡ್ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಿದರು.ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ಎಸ್. ಎನ್. ಸಿನ್ನೂರ್, ಎಸ್.ಎಂ. ಬ್ಯಾಹಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ…
ಉಚಿತ ಆರೋಗ್ಯ ಶಿಬಿರ ಯಶಸ್ವಿ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ಜಿಲ್ಲಾ ಯುವ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಯಶಸ್ವಿಯಾಯಿತು.ಈ ಶಿಬಿರದಲ್ಲಿ ಕಣ್ಣು, ಕ್ಯಾನ್ಸರ್, ಬಿಪಿ, ಶುಗರ್, ಸಾಮಾನ್ಯ ಚಿಕಿತ್ಸೆ ಹಾಗೂ ಕಿವಿ ,ಮೂಗು, ಗಂಟಲು, ವಿವಿಧ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.130 ಜನರ ಕಣ್ಣಿನ ತಪಾಸಣೆ ನಡೆಸಲಾಯಿತು. ಈ ರೋಗಿಗಳ ಪೈಕಿ 14 ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡುವುದಾಗಿ ಘೋಷಿಸಲಾಯಿತು.120 ಮಂದಿ ಬಿಪಿ, ಶುಗರ್, ಕ್ಯಾನ್ಸರ್,…


