ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತ- ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 2: ಅನುಭವ ಮಂಟಪವು ಶರಣ ಚಳವಳಿಯ ಹೃದಯವಾಗಿತ್ತು. ಇಲ್ಲಿ ಮಹಿಳೆಯರು ಮೌನ ಶ್ರೋತೃಗಳಾಗಿರಲಿಲ್ಲ. ಅವರು ತರ್ಕಕಾರ್ತಿಯರು, ಪ್ರಶ್ನಕರೂ ಮತ್ತು ವಚನ ರಚನಾಕಾರರೂ ಆಗಿದ್ದರು. ಅಕ್ಕಮಹಾದೇವಿ ಅನುಭವ ಮಂಟಪದಲ್ಲಿ ಪುರುಷ ಶರಣರ ಮುಂದೆ ಧೈರ್ಯವಾಗಿ ಮಾತನಾಡಿದರು. ಹೀಗಾಗಿ ಅಕ್ಕಮಹಾದೇವಿ ಸ್ತ್ರೀ ಸ್ವಾತಂತ್ರ‍್ಯ ಮತ್ತು ಸಮಾನತೆಯ ಸಂಕೇತವಾಗಿದ್ದಾರೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 12ನೇ…

Read More

ಭ್ರಷ್ಟಾಚಾರದ ಕೂಪವಾಗಿದ್ದ MGNREGA ಗೆ ಮುಕ್ತಿ; ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ‘ವಿಬಿ-ಜಿ ರಾಮ್ ಜಿ’ ಅಡಿಪಾಯ: ಈರಣ್ಣ ಕಡಾಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಯುಪಿಎ ಆಡಳಿತಾವಧಿಯ MGNREGA ಯೋಜನೆಯು ಭ್ರಷ್ಟಾಚಾರ, ಅಸಮರ್ಪಕ ಅನುಷ್ಠಾನ ಮತ್ತು ಸುಳ್ಳು ಆಸ್ತಿ ಸೃಷ್ಟಿಯ ಕೇಂದ್ರವಾಗಿತ್ತು. ಈ ವೈಫಲ್ಯಗಳನ್ನು ಸರಿಪಡಿಸಿ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎನ್ಡಿಎ ಸರ್ಕಾರವು ಕ್ರಾಂತಿಕಾರಿ ‘ವಿಬಿ-ಜಿ ರಾಮ್ ಜಿ’ (VB-G RAM G Act, 2025) ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದರು.ನಗರದ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ‘ವಿಬಿ-ಜಿ…

Read More

ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More