
ಮಕ್ಕಳ ಉಜ್ವಲ ಭವಿಷ್ಯ ಸಾಕಾರಕ್ಕೆ ಅಧಿಕಾರಿಗಳು ಸ್ವಯಂಪ್ರೇರಿತರಾಗಿ ವಾರಕ್ಕೊಂದು ಸಲ ಹಾಸ್ಟೆಲ್‍ಗಳಿಗೆ ಭೇಟಿ ನೀಡಿ- ಅಧಿಕಾರಿಗಳಿಗೆ ಡಿಸಿ ಸಲಹೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು.30:ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಜಿಲ್ಲೆಯಲ್ಲಿರುವ ಬಾಲಕ ಹಾಗೂ ಬಾಲಕಿಯರ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಭವಿಷ್ಯ ಹಾಗೂ ಅವರ ಜೀವನ ಸುಂದರಗೊಳಿಸಿಕೊಳ್ಳಲು ಸರ್ಕಾರ ಒದಗಿಸಿರುವ ಸೌಲಭ್ಯಗಳು ಸಮರ್ಪಕವಾಗಿ ದೊರಕುತ್ತಿರುವ ಕುರಿತು ಅಧಿಕಾರಿಗಳು ಸ್ವಯಂಪ್ರೇರಿತವಾಗಿ ವಾರಕ್ಕೊಂದು ಸಲ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ.ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ…