
ಗಣೇಶ ವಿಸರ್ಜನೆ: ವಿದ್ಯುತ್ ತಗುಲಿ ಯುವಕ ಸಾವು ಪ್ರಕರಣ, ಯುವಕನ ಸಹೋದರಿಗೆ ಸಿದ್ದಸಿರಿ ಸೌಹಾರ್ದದಲ್ಲಿ ನೌಕರಿ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6: ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಳೆ ಗಲ್ಲಿಯ ಯುವಕ ಶುಭಂ ಸಂಕಪಾಲ ಅವರ ಮನೆಗೆ ಹಾಗೂ ಗಾಯಗೊಂಡ ಯುವಕರ ಮನೆಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ದುರ್ಘಟನೆ ನಡೆದಿರುವುದು ಅತ್ಯಂತ ನೋವಿನ ವಿಷಯ. ಇದೊಂದು…