ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ನ. 10: ಒಂದು ಚಿತ್ರ ಸಾವಿರ ಪದಗಳಿಗೆ ಸಮವಾಗಿದ್ದು, ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ, ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಫೋಟೋಗ್ರಫಿ…

Read More

ಆಟವಾಡುತ್ತ ಬಾವಿಗೆ ಬಿದ್ದು ಬಾಲಕಿ ಸಾವು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12: ಬಾಲಕಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಂಡಿ ಪಟ್ಟಣ ಹೊರವಲಯದ ಧನಸಿಂಗ್ ತಾಂಡಾದಲ್ಲಿ ನಡೆದಿದೆ.ಅರ್ಚನಾ ರಾಠೋಡ (8) ಮೃತಪಟ್ಟ ಬಾಲಕಿ.ತಾಯಿಯೊಂದಿಗೆ ಕುರಿ ಮೇಯಿಸಲು ಹೋದಾಗ ಆಟವಾಡುತ್ತಾ ಆಕಸ್ಮಿಕವಾಗಿ ಬಾಲಕಿ ಅರ್ಚನಾ ಸೋಮವಾರ ಸಂಜೆ ಬಾವಿಯಲ್ಲಿ ಬಿದ್ದಿದ್ದಳು.ಅಗ್ನಿಶಾಮಕ ದಳದ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ನಡೆಸಿ ಮಂಗಳವಾರ ಬಾಲಕಿ ಶವವನ್ನು ಹೊರ ತೆಗೆದಿದ್ದಾರೆ. ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More