ಮೈಸೂರು ಅರಮನೆ ಆವರಣದಲ್ಲಿ ನಡೆದ ಅಂಬಾರಿ ಮೆರವಣಿಗೆಯಲ್ಲಿ ನಾಡ ದೇವಿ ಚಾಮುಂಡೇಶ್ವರಿ ದೇವಿಗೆ ಸಿಎಂ, ಡಿಸಿಎಂ ಪುಷ್ಪಾರ್ಚನೆ
ಸಪ್ತ ಸಾಗರ ವಾರ್ತೆ, ಮೈಸೂರು, ಅ. 2: ಮೈಸೂರು ಅರಮನೆ ಆವರಣದಲ್ಲಿ ವಿಜಯ ದಶಮಿ ನಿಮಿತ್ತ ಗುರುವಾರ ಅಭಿಮನ್ಯು ಹೊತ್ತ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡಿದರು. ಸಿಎಂ ಸಿದ್ದರಾಮಯ್ಯ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಸಚಿವರಾದ ಮಹದೇವಪ್ಪ, ಶಿವರಾಜ್ ತಂಗಡಗಿ, ಸಂಸದ ಯದುವೀರ್ ಒಡೆಯರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಲಕ್ಷೀಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.


