
ಕಳುವಾದ ಅಡಿವಿಟ್ಟ ಚಿನ್ನಕ್ಕೆ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರಿಂದ ಬ್ಯಾಂಕ್ ಎದುರು ಪ್ರತಿಭಟನೆ
ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಬ್ಯಾಂಕಿನಲ್ಲಿ ಕಳುವಾದ ಚಿನ್ನಕ್ಕೆ ಪರಿಹಾರ ರೂಪದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಕೆನೆರಾ ಬ್ಯಾಂಕ್ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೇ 25ರಂದು ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಕಳ್ಳರು ಈ ಬ್ಯಾಂಕಿನಿಂದ 58 ಕೆಜಿಗೂ ಅಧಿಕ ಚಿನ್ನ, 5 ಲಕ್ಷ ನಗದು ಹಣ ಕದ್ದು ಪರಾರಿಯಾಗಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿ 15…