
ಸರ್ಕಾರಿ ವೈದ್ಯಕೀಯ ಕಾಲೇಜ್ ಗೆ ಆಗ್ರಹಿಸಿ 8ನೇ ದಿನದಲ್ಲಿ ಮುಂದುವರೆದ ಧರಣಿ ಸತ್ಯಾಗ್ರಹ
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 25:ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕೆಂದು ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಕೈಗೊಂಡ ಧರಣಿ ಸತ್ಯಾಗ್ರಹ ಗುರುವಾರ 8ನೇ ದಿನಕ್ಕೆ ಕಾಲಿಟ್ಟಿದ್ದು, ವಿವಿಧ ಸಂಘಟನೆಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.ಏತನ್ಮಧ್ಯೆ ಸತ್ಯಾಗ್ರಹ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಸತ್ಯಾಗ್ರಹ ಹಿಂತೆಗೆದುಕೊಳ್ಳಲು ಮನವಿ ಮಾಡಲಾಯಿತು. ಆದರೆ ಹೋರಾಟಗಾರರು ವಿಜಯಪುರ ಜಿಲ್ಲೆಗೆ ಘೋಷಣೆ ಮಾಡಿದ ಪಿಪಿಪಿ ಮಾದರಿ ವೈದ್ಯಕೀಯ…