ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ: ಡಿಕೆಶಿ ವಿಸ್ತರಣೆ ಶೀಘ್ರದಲ್ಲೇ; ರಿಜಿಜು ಕಾಂಗ್ರೆಸ್‌ ಚಿಂತೆ ಬಿಟ್ಟು ತಮ್ಮ ಸರ್ಕಾರ ನೋಡಲಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 8:ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಶೀಘ್ರದಲ್ಲೇ ಇತ್ಯರ್ಥವಾಗಲಿದ್ದು, ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದರು.ವಿಧಾನಸೌಧ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ಮಹಿಳೆಯರಿಗೆ ಹೆಚ್ಚಿನ ಶಕ್ತಿ ನೀಡುತ್ತೇವೆ” ಎಂದರು.ಮಹಿಳಾ ಮೀಸಲಾತಿ ವಿಚಾರವಾಗಿ ರಾಹುಲ್‌ ಗಾಂಧಿ ಅವರ ಹೇಳಿಕೆಗೆ ಕೇಂದ್ರ…

Read More

ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಿ: ಸರ್ಕಾರಕ್ಕೆ ಗುರುಲಿಂಗಪ್ಪ ಅಂಗಡಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.7: ಬಣಜಿಗ ಸಮಾಜವನ್ನು ಕೂಡಲೇ ಪ್ರವರ್ಗ 2ಎ ಅಡಿಯಲ್ಲಿ ಸೇರ್ಪಡೆಗೊಳಿಸಿ ನ್ಯಾಯಾಲಯದ ಆದೇಶವನ್ನು ಜಾರಿಗೆ ತರಬೇಕು ಎಂದು ಬಿಜೆಪಿ ವಿಜಯಪುರ ಜಿಲ್ಲಾಧ್ಯಕ್ಷ ಹಾಗೂ ಬಣಜಿಗ ಸಮಾಜದ ಮುಖಂಡ ಗುರುಲಿಂಗಪ್ಪ ಅಂಗಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಸರ್ಕಾರ ವಿಳಂಬ ಮಾಡದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.1994ರ ಮೊದಲು ಬಣಜಿಗ ಸಮಾಜ ಶಿಕ್ಷಣ ಮತ್ತು ರಾಜಕೀಯ ಮೀಸಲಾತಿಯಲ್ಲಿ ಪ್ರವರ್ಗ…

Read More

ನಿಮ್ಮ ಜತೆ ಸರ್ಕಾರವಿದೆ, ನೀವು ಸರ್ಕಾರದ ಜತೆ ನಿಲ್ಲಿ- ಸಿಎಂ ಡಿಕೆಶಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ.6: “ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು.ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಶಿವಕುಮಾರ್ ಅವರು…

Read More

ಸಚಿವ ಸ್ಥಾನ ಅತೃಪ್ತಿ: ರಾಜೀನಾಮೆ ಕೊಟ್ಟರೆ ಕ್ಷಣದಲ್ಲೇ ಅಂಗೀಕಾರ – ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 4: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ನೀಡಿದ್ದಾರೆ. “ರಾಜೀನಾಮೆ ಕೊಡುವವರನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಯಾರಾದರೂ ರಾಜೀನಾಮೆ ನೀಡಿದರೆ ಕ್ಷಣದಲ್ಲೇ ಅಂಗೀಕರಿಸುತ್ತೇನೆ. ರಾಜಕೀಯದಲ್ಲಿ ತಾಳ್ಮೆ ಅತ್ಯಂತ ಮುಖ್ಯ, ಪಕ್ಷವೇ ಮೊದಲ ಆದ್ಯತೆ” ಎಂದು ಹೇಳಿದರು.ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ನನಗೂ, ಪರಮೇಶ್ವರ್ ಅವರಿಗೂ ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ…

Read More

ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲಕ್ಕೆ ಸರ್ಕಾರವೇ ಹೊಣೆ: ಉಸ್ತುವಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ತಿಕೋಟಾದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಅವ್ಯವಸ್ಥೆ ಹಾಗೂ ಪ್ರತಿಭಟನಾ ನಿರತ ಅಭ್ಯರ್ಥಿಗಳ ಮೇಲೆ ನಡೆದಿರುವುದಾಗಿ ಆರೋಪಿಸಲಾದ ಲಾಠಿ ಪ್ರಹಾರ ಪ್ರಕರಣ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಪ್ರತೀಕವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು. ಈ ಘಟನೆಗೆ ನೈತಿಕ ಹೊಣೆ ಹೊತ್ತು ಜಿಲ್ಲಾ ಉಸ್ತುವಾರಿ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವರು…

Read More

ಕಾವೇರಿ ನೀರು: ರೈತರ ಹಿತ ಕಾಪಾಡಲು ಸರ್ಕಾರ ದೃಢ ನಿಲುವು ತಾಳಲಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒತ್ತಾಯ ಸಪ್ತಸಾಗರ ವಾರ್ತೆ,ವಿಜಯಪುರ, ಜು. 30:ಕಾವೇರಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ದೃಢ ನಿಲುವು ತಾಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಎಕ್ಸ್ ನಲ್ಲಿ ಆಗ್ರಹಿಸಿದ್ದಾರೆ.“ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ” ಎಂಬ ಮಾತನ್ನು ಉಲ್ಲೇಖಿಸಿದ ಯತ್ನಾಳ್, ಕಾವೇರಿ ನೀರಿನ ಸಮಸ್ಯೆ ತೀವ್ರವಾಗಿರುವ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ದೆಹಲಿ ಪ್ರವಾಸ ಹಾಗೂ…

Read More

ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸರ್ಕಾರಕ್ಕೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15:ಕರ್ನಾಟಕದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ರಾಜಪೂತ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಶ್ರೀ ವೀರ ಮಹಾರಾಣಾ ಪ್ರತಾಪಸಿಂಹ ಜಿಲ್ಲಾ ರಜಪೂತ ಸೇವಾ ಅಭಿವೃದ್ಧಿ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾ ಅಧ್ಯಕ್ಷ ಪರಶುರಾಮ ರಜಪೂತ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಾಜಪೂತ ಸಮಾಜವು ಶಿಕ್ಷಣ, ಉದ್ಯೋಗ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ…

Read More

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯದ ಮೂಲಕ ಎಐ…

Read More

ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ಶಿವರಾಜ್ ಕೆಂಗನಾಳ್ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು.12: ಜಿಲ್ಲೆಯಾದ್ಯಂತ ಮಳೆಯ ಅಭಾವದಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರನ್ನು ಸಂಕಷ್ಟದಿಂದ ಪಾರು ಮಾಡಬೇಕು ಎಂದು ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಕೃಷಿಗೆ ಅವಲಂಬಿತರಾಗಿರುವ ಸಾವಿರಾರು ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಯಾವುದೇ ವಿಳಂಬ ಮಾಡದೆ ರೈತರ ಪರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಈ…

Read More

‘ಮನೆ ಮನೆಗೆ’ ಎಂದ ಸರ್ಕಾರ… ‘ಶಿಬಿರಕ್ಕೆ ಬನ್ನಿ’ ಎಂದ ಅಧಿಕಾರಿಗಳು?:

ವೃದ್ಧರು, ಅಂಗವಿಕಲರು, ದಿನಗೂಲಿ ಕಾರ್ಮಿಕರಿಗೆ ಹೆಚ್ಚಿದ ಸಂಕಷ್ಟ ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ,ವಿಜಯಪುರ, ಜು. 4:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಚುನಾವಣಾ ಆಯೋಗದ ಉದ್ದೇಶ ಸ್ಪಷ್ಟ—ಪ್ರತಿಯೊಬ್ಬ ಅರ್ಹ ಮತದಾರನ ಮನೆ ಬಾಗಿಲಿಗೆ ತೆರಳಿ ಮಾಹಿತಿ ಪರಿಶೀಲಿಸಿ, ದಾಖಲೆಗಳನ್ನು ಸಂಗ್ರಹಿಸಿ, ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು. ಈ ಉದ್ದೇಶಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡುವ ಜವಾಬ್ದಾರಿಯನ್ನು ನೀಡಲಾಗಿದೆ.ಆದರೆ ವಿಜಯಪುರ ಸೇರಿದಂತೆ ಹಲವು ಭಾಗಗಳಿಂದ…

Read More