
ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12:ದ್ರಾಕ್ಷಿ ಬೆಳೆಗಾರರ ವಿವಿಧ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ರೈತ ಸಂಘ ಶುಕ್ರವಾರ ಮನವಿ ಸಲ್ಲಿಸಿತು.ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ,ಇಡೀ ಕರ್ನಾಟಕದಲ್ಲಿ ಅಂದಾಜು 1 ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ. ವಿಜಯಪುರ ಜಿಲ್ಲೆಯಲ್ಲಿಯೇ ಶೇ. 70ರಷ್ಟು ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ 15-20 ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ. ಆದರೆ ದಲ್ಲಾಳಿಗಳ…