ಕೇಂದ್ರದ ಜಿಎಸ್‌ಟಿ ನೀತಿ ಮೂಲಕ ಜನರ ಲೂಟಿ: ಮಂಜುನಾಥ ಗೌಡ ಟೀಕೆ
ಸಪ್ತಸಾಗರ ವಾರ್ತೆ, ಮುದ್ದೇಬಿಹಾಳ, ಅ.5 :ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಜಿಎಸ್‌ಟಿ, ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಕೇಂದ್ರ…


