ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು: ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 30: ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಒಪ್ಪಿರುವುದನ್ನು ಎಐಡಿಎಸ್ ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಸ್ವಾಗತಿಸಿದ್ದಾರೆ.ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳಾದರೂ, ಅತಿಥಿ ಉಪನ್ಯಾಸಕರಿಲ್ಲದೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತರಗತಿಗಳನ್ನೇ ನಡೆಸದೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಕೂಡ ಘೋಷಿಸಿವೆ. ಇನ್ನೊಂದೆಡೆ, ಖಾಸಗಿ ಕಾಲೇಜುಗಳಲ್ಲಿ ಸರಾಗವಾಗಿ ಪಾಠಗಳು ನಡೆದು ಅಲ್ಲಿನ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುತ್ತಿದ್ದಾರೆ. ರಾಜ್ಯದ ಬಡ ವಿದ್ಯಾರ್ಥಿಗಳಿಗಾದ ಈ ಘೋರ ಅನ್ಯಾಯವನ್ನು ಖಂಡಿಸಿ ಎಐಡಿಎಸ್ಓ ನೇತೃತ್ವದಲ್ಲಿ…

Read More