
ಹಡಪದ ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ : ಬಬಲೇಶ್ವರ
ಸಪ್ತಸಾಗರ ವಾರ್ತೆ, ವಿಜಯಪುರ ಜು.10 : ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಸ್ವತ್ತು ಆಸ್ತಿ ಇದ್ದಂತೆ. ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರ…