ಆರೋಗ್ಯಯುತ ಜೀವನಕ್ಕೆ ದೈಹಿಕ-ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯವಶ್ಯಕ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.25:ಒತ್ತಡದ ಜೀವನದ ಮಧ್ಯೆ ಆರೋಗ್ಯಯುತ ಬದುಕಿಗೆ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಮ್ಮ ದೈನಂದಿನದ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಗುರುವಾರ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಾನಸಿಕ…

Read More

ಬಿಎಲ್ ಡಿಇ ಆಸ್ಪತ್ರೆಯಲ್ಲಿ ನೇರ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ARK) ಯೋಜನೆ ಅಡಿಯಲ್ಲಿ ರೋಗಿಗಳು (AB-ArK) ಪ್ಯಾಕೇಜ್ ಗಳಲ್ಲಿ 900 (3A) ಕೋಡ್ ಗಳು ಮತ್ತು 254 (2B) ಕೋಡ್ ಗಳಲ್ಲಿ ಬರುವ ಕಾಯಿಲೆಗಳಿಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಂದ ಶಿಫಾರಸು ಇಲ್ಲದೇ ನೇರವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.ಈ ಮುಂಚೆ ಈ ಸ್ಕೀಂ ನಡಿ ನವಜಾತ…

Read More

ಶಸ್ತ್ರ ಚಿಕಿತ್ಸೆಗೆ ಆರೋಗ್ಯ ವಿಮೆ ಸೌಲಭ್ಯ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು ಆಸ್ಪತೆಯಲ್ಲಿ ಇ.ಸಿ.ಎಚ್ಎಸ್(Ex- Servicemen Contributory Health Scheme) ಮತ್ತು ಇ.ಎಸ್.ಐ.ಸಿ(Employees State Insurance Corporation) ವಿಮೆ ಅಡಿಯಲ್ಲಿ ನಗದು ರಹಿತವಾಗಿ ನಾನಾ ಕಾಯಿಲೆಗಳಿಗೆ ಸೂಪರ್ ಸ್ಪೇಷಾಲಿಟಿ ಚಿಕಿತ್ಸೆ ಸೌಲಭ್ಯ ಪ್ರಾರಂಭವಾಗಿದೆ.ಸೂಪರ್ ಸ್ಪೇಷಾಲಿಟಿ ಚಿಕಿತ್ಸೆಗಳಾದ ಹೃದಯ ರೋಗ, ನರರೋಗ, ಮೂತ್ರಪಿಂಡ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ, ಮೊಳಕಾಲು ಮಂಡಿ, ಸೋಂಟದ ಕೀಲು ಶಸ್ತ್ರಚಿಕಿತ್ಸೆ, ಚಿಕ್ಕ ಮಕ್ಕಳ ಶಸ್ತ್ರಚಿಕಿತ್ಸೆಗಳಿಗೆ ಸಂಬಂಧಿಸಿದಂತೆ ಮೇಲಿನ ಎರಡು…

Read More

ರಾಜ್ಯ ಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಸೆ.6 ಮತ್ತು 7 ರಂದು ನಗರದ ಕೆ.ಎಸ್. ಆರ್.ಟಿ. ಸಿ ಡಿಪೋ ನಂಬರ್ 2ರ ಬಳಿ ಇರುವ ಅಭಿನವ ವಿದ್ಯಾ ಸಂಸ್ಥೆಯ ಆವರಣದಲ್ಲಿ ಪ್ರಥಮ ಕರ್ನಾಟಕ ರಾಜ್ಯ ಮಟ್ಟದ ಸೂರ್ಯನಮಸ್ಕಾರ ಕ್ರೀಡಾಕೂಟವು ಜರಗುವದು.ಸೂಪರ್ ಮಿನಿ 9 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಮಿನಿ 12 ವರ್ಷದ ಒಳಗಡೆ ಬಾಲಕ, ಬಾಲಕಿಯರು ಮತ್ತು, 14 ವರ್ಷದ ಒಳಗಡೆ ಬಾಲಕ ಬಾಲಕಿಯರು, 18 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಹಾಗೂ 18 ವರ್ಷದ…

Read More

ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ: ವೇಣುಗೋಪಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 30: ಆಯುಷ್ ಆಸ್ಪತ್ರೆಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಹೆಚ್ಚಿಸಿ, ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾ(QCI) ಮಾರ್ಗದರ್ಶನ ಮಾಡುತ್ತಿದೆ ಎಂದು ಕ್ಯೂಸಿಐ ದಕ್ಷಿಣ ಭಾರತ ಮುಖ್ಯಸ್ಥ ವೇಣುಗೋಪಾಲ ಸಿ ತಿಳಿಸಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಕ್ಯೂಸಿಐ ಮತ್ತು ನ್ಯಾಷನಲ್ ಅಕ್ರಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್ಕೇರ್ ಪ್ರೊವೈಡರ್ಸ್ (NABH) ಸಹಯೋಗದಲ್ಲಿ ಆಯೋಜಿಸಲಾಗಿದ್ದ ಗುಣವತ್ತಾ ಯಾತ್ರೆ…

Read More

ಉಚಿತ ಆರೋಗ್ಯ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ಜಿಲ್ಲಾ ಯುವ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಯಶಸ್ವಿಯಾಯಿತು.ಈ ಶಿಬಿರದಲ್ಲಿ ಕಣ್ಣು, ಕ್ಯಾನ್ಸರ್, ಬಿಪಿ, ಶುಗರ್, ಸಾಮಾನ್ಯ ಚಿಕಿತ್ಸೆ ಹಾಗೂ ಕಿವಿ ,ಮೂಗು, ಗಂಟಲು, ವಿವಿಧ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.130 ಜನರ ಕಣ್ಣಿನ ತಪಾಸಣೆ ನಡೆಸಲಾಯಿತು. ಈ ರೋಗಿಗಳ ಪೈಕಿ 14 ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡುವುದಾಗಿ ಘೋಷಿಸಲಾಯಿತು.120 ಮಂದಿ ಬಿಪಿ, ಶುಗರ್, ಕ್ಯಾನ್ಸರ್,…

Read More

ಆಗಸ್ಟ್ 3 ರಂದು ಜಿಲ್ಲಾ ಯೋಗಾಸನ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಕೇಂದ್ರ ಸರ್ಕಾರದ ಕ್ರೀಡಾ ಇಲಾಖೆಯಿಂದ ಮಾನ್ಯತೆ ಪಡೆದ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾಆಗ ಅಂಗಸಂಸ್ಥೆಯಾದ ರಾಜ್ಯ ಯೋಗಾಸನ ಕ್ರೀಡಾ ಸಂಸ್ಥೆ, ಜಿಲ್ಲಾ ಹಾಗೂ ರಾಜ್ಯ ಮತು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಈ ನಿಮಿತ್ತ ಆಗಸ್ಟ್ 3ರಂದು ವಿಜಯಪುರ ತಾಲೂಕಿನ ತಿಡಗುಂದಿಯ ಮಾನಸ ಗಂಗೋತ್ರಿ ಶಾಲೆಯಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ ಏರ್ಪಡಿಸಲಾಗಿದೆ.ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಸ್ಪರ್ಧಾಳುಗಳು ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನು…

Read More

ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ: ಸಚಿವ ಎಂ.ಬಿ. ಪಾಟೀಲ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19 : ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.ಶನಿವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ…

Read More

ಶಸ್ತ್ರ ಚಿಕಿತ್ಸೆ ಗಾಯ ಗುಣಪಡಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ…

Read More

ವೈದ್ಯರು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು-ಡಾ. ಎಂ. ಎಂ. ಪಾಟೀಲ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 13: ಯುವ ವೈದ್ಯರು ಪ್ರಸಕ್ತ ಕಾಲಕ್ಕೆ ಅನುಗುಣವಾಗಿ ಸಂಶೋಧನೆಗೆ ಹೆಚ್ಚು ಒತ್ತು ಕೊಟ್ಟು ಸಮಾಜಕ್ಕೆ ವಿಶೇಷ ಕೊಡುಗೆ ನೀಡಬೇಕು ಎಂದು ಬಿ. ಎಲ್. ಡಿ. ಇ ವಿಶ್ವವಿದ್ಯಾಲಯ¸ಶ್ರೀ. ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಎಂ. ಎಂ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಸ್ವಸ್ಥವತ್ತ ವಿಭಾಗ ಹಾಗೂ ಸಾಂಸ್ಥಿಕ ಸಂಶೋಧನ…

Read More